ದೇಶದ ವಿವಿಧ ಭಾಗಗಳಲ್ಲಿ ಚೈತ್ರ ನವರಾತ್ರಿ ಆಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶದ ವಿವಿಧ ಭಾಗಗಗಳಲ್ಲಿ ಚೈತ್ರ ನವರಾತ್ರಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.
Published: 02nd April 2022 10:04 AM | Last Updated: 02nd April 2022 10:04 AM | A+A A-

ಪ್ರಧಾನಿ ಮೋದಿ
ನವದೆಹಲಿ: ದೇಶದ ವಿವಿಧ ಭಾಗಗಗಳಲ್ಲಿ ಚೈತ್ರ ನವರಾತ್ರಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಎಲ್ಲಾ ದೇಶವಾಸಿಗಳಿಗೆ ನವರಾತ್ರಿಯ ಶುಭಾಶಯಗಳು. ಈ ಶಕ್ತಿಯ ಆರಾಧನೆಯ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬಲಿ" ಎಂದು ಹೇಳಿದ್ದಾರೆ.
ಈ ನಡುವೆ ಯುಗಾದಿ ಹಬ್ಬಕ್ಕೂ ಶುಭಾಶಯ ಕೋರಿರುವ ಅವರು, 'ಯುಗಾದಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು, 'ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನವ ಸಂವತ್ಸರವು ನಿಮ್ಮೆಲ್ಲರ ಬದುಕಿನಲ್ಲಿ ಹೊಸ ಉತ್ಸಾಹ ಮತ್ತು ಸಂಭ್ರಮ ತರಲಿ' ಎಂದೂ ಹಾರೈಸಿದ್ದಾರೆ.
ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ. ಯುಗಾದಿ ತತ್ಸಮ ಪದವಾದರೆ ಉಗಾದಿ ತದ್ಭವ, ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ.
ವೈವಿಧ್ಯತೆಯಲ್ಲಿ ಏಕತೆಯ ಸಂದೇಶವನ್ನು ಇಡೀ ಜಗತ್ತಿಗೆ ಸಾರುವ ಭಾರತ ದೇಶದಲ್ಲಿ ಯುಗಾದಿ ಹಬ್ಬವನ್ನು ಬೇರೆ ಬೇರೆ ಕಡೆಯಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯಲಾಗುತ್ತದೆ. ಅಷ್ಟೇ ಅಲ್ಲದೇ ವಿಶಿಷ್ಟವಾಗಿ ಹಾಗೂ ವಿಭಿನ್ನವಾಗಿ ಯುಗಾದಿಯನ್ನು ಆಚರಿಸುವುದು ವಾಡಿಕೆ.
ರಾಜ್ಯದಲ್ಲಿ ನಾವು ‘ಯುಗಾದಿ’ ಅಥವಾ ಉಗಾದಿ ಎಂದು ಕರೆದರೆ, ಮಹಾರಾಷ್ಟ್ರದಲ್ಲಿ’ ಗುಡಿಪಾಡ್ವ’ಎಂಬ ಹೆಸರಿನಿಂದ ಕರೆಯುತ್ತಾರೆ. ಉತ್ತರಭಾರತದಲ್ಲಿ ಇದೇ ಹಬ್ಬವನ್ನು’ಬೈಸಾಕಿ’ಎಂಬ ವಿಶಿಷ್ಟ ನಾಮದೊಂದಿಗೆ ಗುರುತಿಸಲಾಗುತ್ತದೆ. ವೈವಿಧ್ಯತೆಯ ಆಚರಣೆಗಳೊಂದಿಗೆ ಎಲ್ಲರೂ ಸೇರಿ ಭೇದಭಾವವನ್ನು ಮರೆತು ಹಬ್ಬವನ್ನು ಆಚರಿಸುತ್ತಾರೆ.