
ಸಂಗ್ರಹ ಚಿತ್ರ
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್, ಕಮ್ಯುನಿಸ್ಟ್ ಪಕ್ಷದ ಸೀತಾರಾಮ್ ಯೆಚೂರಿ ಸೇರಿದಂತ ವಿರೋಧ ಪಕ್ಷಗಳ ಹಲವು ನಾಯಕರು ದೆಹಲಿಯಲ್ಲಿ ನಡೆದ ಡಿಎಂಕೆ ಕಚೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ: ಮುಂಬೈ: ಮಸೀದಿಗಳಿಂದ ಧ್ವನಿ ವರ್ಧಕ ತೆರವಿಗೆ ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಒತ್ತಾಯ
ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ಐತಿಹಾಸಿಕ ಘಟನೆ ಎಂದು ಬಣ್ಣಿಸಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಸಿ.ಎಂ ಸ್ಟಾಲಿನ್ ವಿರೋಧ ಪಕ್ಷಗಳ ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ದೇಶದ ರಾಜಕಾರಣದಲ್ಲಿ ಬದಲಾವಣೆ ಪರ್ವದ ಧ್ಯೋತಕ ಎಂದಿದ್ದಾರೆ.
ಇದನ್ನೂ ಓದಿ: ಬಾಲಿವುಡ್ ನಟನ ಪ್ಯಾನ್ ಕಾರ್ಡ್ ದುರ್ಬಳಕೆ: ನಟನ ಹೆಸರಲ್ಲಿ ಸಾಲ ಪಡೆದು ವಂಚನೆ
ಅಲ್ಲದೆ ರಾಷ್ಟ್ರ ರಾಜಧಾನಿಯಲ್ಲಿ ಕಚೇರಿ ತೆರೆದಿರುವುದರಿಂದ ದೇಶದ ರಾಜಕಾರಣದಲ್ಲಿ ಪಕ್ಷ ಪ್ರಮುಖ ಪಾತ್ರ ವಹಿಸುವ ಬಗ್ಗೆ ಆಶಾವಾದ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ಸಚಿವರು ಮತ್ತು ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಕೂಡಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಭಗವಂತ್ ಮಾನ್, ಕೇಜ್ರಿವಾಲ್: ಗುಜರಾತ್ ಚುನಾವಣೆ ಮೇಲೆ AAP ದೃಷ್ಟಿ