ಜಮ್ಮು-ಕಾಶ್ಮೀರ: ಪೂಂಚ್‌ನ ಎಲ್‌ಒಸಿ ಬಳಿ ಉಗ್ರರ ಅಡಗುತಾಣ ಪತ್ತೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
Published: 04th April 2022 09:16 AM | Last Updated: 04th April 2022 01:34 PM | A+A A-

ಸಾಂದರ್ಭಿಕ ಚಿತ್ರ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ನೂರಕೋಟೆ ಗ್ರಾಮದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡು ಮ್ಯಾಗಜೀನ್ ನೊಂದಿಗೆ ಎರಡು ಎಕೆ-47 ರೈಫಲ್ಸ್ ಗಳು, 63 ಗುಂಡು ಸುತ್ತುಗಳು, ಹ್ಯಾಂಡ್ ಗ್ರೀಪ್ ನೊಂದಿಗೆ ಒಂದು 223 ಬೋರ್ ಎಕೆ ಮಾದರಿಯ ಗನ್, ಅದರು ಎರಡು ಮ್ಯಾಗಜಿನ್ ಗಳು ಮತ್ತು 20 ಗುಂಡು ಸುತ್ತುಗಳು ಮತ್ತು ಮ್ಯಾಗಜಿನ್ ನೊಂದಿಗೆ ಚೀನಾದ ಪಿಸ್ತೂಲ್ ವೊಂದನ್ನು ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಆದಾಗ್ಯೂ, ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.