ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವರ ಆಸ್ತಿ ಜಪ್ತಿ ಮಾಡಿದ ಇಡಿ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ...
Published: 05th April 2022 04:04 PM | Last Updated: 05th April 2022 04:04 PM | A+A A-

ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಮತ್ತು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರ ಕುಟುಂಬಕ್ಕೆ ಸಂಬಂಧಿಸಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಮಂದಳವಾರ ಜಪ್ತಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನೆಲೆಯಲ್ಲಿ ಸುಮಾರು 4.81 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ವಶಕ್ಕೆ ತೆಗೆದುಕೊಂಡಿದೆ.
ಇದನ್ನು ಓದಿ: ಮಂಗಳೂರು: ಫೆಮಾ ಕಾಯ್ದೆಯಡಿ ಉದ್ಯಮಿ ಮನೆ ಮೇಲೆ ಇಡಿ ದಾಳಿ, ಕೋಟ್ಯಂತರ ರು. ಮೌಲ್ಯದ ಆಸ್ತಿ ಜಪ್ತಿ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನಿ ಲಾಂಡರಿಂಗ್ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ತನಿಖೆ ಎದುರಿಸುತ್ತಿರುವ ಒಂದೆರಡು ಸಂಸ್ಥೆಗಳೊಂದಿಗೆ ಜೈನ್ ಅವರ ಕುಟುಂಬದ ಸದಸ್ಯರು ಸಂಪರ್ಕ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಪ್ರಾರಂಭಿಸಿದೆ.