ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್'ರನ್ನು ವಶಕ್ಕೆ ಪಡೆದ ಸಿಬಿಐ
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ಬುಧವಾರ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
Published: 06th April 2022 01:41 PM | Last Updated: 06th April 2022 01:41 PM | A+A A-

ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್
ಮುಂಬೈ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ಬುಧವಾರ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ದೇಶಮುಖ್ ಅವರನ್ನು ಸಿಬಿಐ ತಂಡವು ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಕಸ್ಟಡಿಗೆ ತೆಗೆದುಕೊಂಡು ನಂತರ ಬಂಧನಕ್ಕೊಳಪಡಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಮ್ಮ ವಿರುದ್ಧದ ಭ್ರಷ್ಟಾಚಾರದ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ತನ್ನನ್ನು ಕಸ್ಟಡಿಗೆ ತೆಗೆದುಕೊಳ್ಳಲು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೇಶಮುಖ್ ಈ ಹಿಂದೆ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದರು.
ದೇಶಮುಖ್ ಅವರು ಸೋಮವಾರ ವಕೀಲ ಅನಿಕೇತ್ ನಿಕಮ್ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ ಸಿಬಿಐ ತನ್ನ ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪ್ರಶ್ನಿಸಿದ್ದರು.
ಎನ್‌ಸಿಪಿಯ ಹಿರಿಯ ನಾಯಕರ ಮನವಿಯನ್ನು ನ್ಯಾಯಮೂರ್ತಿ ರೇವತಿ ಮೋಹಿತೆ ಡೇರೆ ಅವರ ಏಕ ಪೀಠದ ಮುಂದೆ ಬುಧವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.