ಬಿರ್ಭೂಮ್ ಹತ್ಯೆ: ಮೊದಲ ಆರೋಪಿಯನ್ನು ಬಂಧಿಸಿದ ಸಿಬಿಐ; ಮುಂಬೈನಿಂದ ನಾಲ್ವರು ಶಂಕಿತರು ವಶಕ್ಕೆ!
ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಂಟು ಜನರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮೊಲದ ಆರೋಪಿಯನ್ನು ಬಂಧಿಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ಮುಂಬೈನ ನಾಲ್ವರು ಶಂಕಿತರನ್ನು ಬಂಧಿಸಿದೆ.
Published: 07th April 2022 08:13 PM | Last Updated: 07th April 2022 08:13 PM | A+A A-

ಪ್ರತ್ಯಕ್ಷ ದೃಶ್ಯ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಂಟು ಜನರ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮೊಲದ ಆರೋಪಿಯನ್ನು ಬಂಧಿಸಿದೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯು ಮುಂಬೈನ ನಾಲ್ವರು ಶಂಕಿತರನ್ನು ಬಂಧಿಸಿದೆ.
ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಎಂಟು ಜನರ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸುವಂತೆ ಕೊಲ್ಕತ್ತಾ ಹೈಕೋರ್ಟ್ ನಿರ್ದೇಶಿಸಿದ ಬೆನ್ನಲ್ಲೇ ಸಿಬಿಐ ಪ್ರಕರಣಗಳನ್ನು ದಾಖಲಿಸಿತ್ತು.
ಇದನ್ನೂ ಓದಿ: ಬಿರ್ಭೂಮ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ
ಬೊಗ್ಟುಯಿ ಗ್ರಾಮದಲ್ಲಿ ಕೆಲವು ದುಷ್ಕರ್ಮಿಗಳು ಮಾರ್ಚ್ 21ರಂದು 10 ಮನೆಗಳಿಗೆ ಬೆಂಕಿ ಹಚ್ಚಿ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಜನರನ್ನು ಕೊಂದಿದ್ದರು. ಕೊಲ್ಕತ್ತಾ ಹೈಕೋರ್ಟ್ ಶುಕ್ರವಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸರಿಂದ ವಹಿಸಿಕೊಳ್ಳುವಂತೆ ಸಿಬಿಐಗೆ ನಿರ್ದೇಶಿಸಿತ್ತು ಮತ್ತು ಮುಂದಿನ ವಿಚಾರಣೆಯ ದಿನಾಂಕದೊಳಗೆ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿತ್ತು.