ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಬಡ, ಮಧ್ಯಮ ವರ್ಗದವರಿಗೆ ಒದಗಿಸುವುದು ಸರ್ಕಾರದ ಗುರಿ: ಪಿಎಂ ನರೇಂದ್ರ ಮೋದಿ
ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ನೀಡುವುದಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
Published: 07th April 2022 11:26 AM | Last Updated: 07th April 2022 01:31 PM | A+A A-

ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ಆರೋಗ್ಯ ರಕ್ಷಣೆಯನ್ನು ನೀಡುವುದಕ್ಕೆ ಆದ್ಯತೆ ನೀಡುವ ಮೂಲಕ ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರವು ದಣಿವರಿಯಿಲ್ಲದೆ ಕೆಲಸ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಏಪ್ರಿಲ್ 7ನ್ನು ವಿಶ್ವ ಆರೋಗ್ಯ ದಿನ ಎಂದು ಘೋಷಿಸಿದ್ದು ಈ ಸಂದರ್ಭದಲ್ಲಿ ಆರೋಗ್ಯ ಆಶಯವನ್ನಿಟ್ಟುಕೊಂಡು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಮೋದಿ,ವಿಶ್ವ ಆರೋಗ್ಯ ದಿನದ ಶುಭಾಶಯಗಳು. ಪ್ರತಿಯೊಬ್ಬರೂ ಉತ್ತಮ ಆರೋಗ್ಯ ಮತ್ತು ಕ್ಷೇಮದಿಂದ ಇರಲಿ. ಇಂದು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವ ದಿನವಾಗಿದೆ. ಅವರ ಕಠಿಣ ಪರಿಶ್ರಮವೇ ನಮ್ಮ ಗ್ರಹವನ್ನು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
Ayushman Bharat has had a positive impact on several lives and transformed our health sector.
— Narendra Modi (@narendramodi) April 7, 2022
On World Health Day, here are some facets of this pathbreaking scheme. pic.twitter.com/G7EiszAS4T
ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಭಾರತ ಸರ್ಕಾರವು ಅವಿರತವಾಗಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ. ದೇಶದ ನಾಗರಿಕರಿಗೆ ಉತ್ತಮ ಗುಣಮಟ್ಟದ ಮತ್ತು ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆಯನ್ನು ಖಾತರಿಪಡಿಸುವತ್ತ ಗಮನ ಹರಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. "ನಮ್ಮ ರಾಷ್ಟ್ರವು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ಗೆ ನೆಲೆಯಾಗಿದೆ ಎಂಬುದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ವಿಷಯ" ಎಂದು ಅವರು ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ.
ಪ್ರಧಾನಮಂತ್ರಿ ಜನ್ ಔಷಧಿಯಂತಹ ಯೋಜನೆಗಳ ಫಲಾನುಭವಿಗಳೊಂದಿಗೆ ನಾನು ಸಂವಾದ ನಡೆಸಿದಾಗ ನನಗೆ ಸಂತೋಷವಾಗುತ್ತದೆ. ಕೈಗೆಟಕುವ ದರದ ಆರೋಗ್ಯ ರಕ್ಷಣೆಯತ್ತ ನಮ್ಮ ಗಮನವು ಬಡ ಮತ್ತು ಮಧ್ಯಮ ವರ್ಗದವರಿಗೆ ಗಮನಾರ್ಹ ಪ್ರಯೋಜನವನ್ನು ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.
WHO-ವಿಶ್ವ ಆರೋಗ್ಯ ಸಂಸ್ಥೆಯು ಮಾನವರು ಮತ್ತು ಈ ಗ್ರಹವನ್ನು ಆರೋಗ್ಯವಾಗಿಡಲು ಮತ್ತು ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡಲು ಅಗತ್ಯವಾದ ತುರ್ತು ಕ್ರಮಗಳ ಮೇಲೆ ಗಮನ ಕೇಂದ್ರೀಕರಿಸುತ್ತದೆ.