ಕುಲ್ಗಾಮ್ ಎನ್ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 11th April 2022 09:12 PM | Last Updated: 11th April 2022 09:12 PM | A+A A-

ಭಾರತೀಯ ಯೋಧರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ನ ಖುರ್ಬತ್ಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಪತ್ತೆ ಕಾರ್ಯಾಚರಣೆ ಆರಂಭಿಸಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಭದ್ರತೆ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ ನಂತರ ಶೋಧ ಕಾರ್ಯಾಚರಣೆಯು ಎನ್ಕೌಂಟರ್ಗೆ ತಿರುಗಿತು ಎಂದರು. ಕಾರ್ಯಾಚರಣೆ ಮುಂದುವರೆದಿದೆ.