ಶ್ರೀಕಾಕುಳಂ: ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಐವರ ಸಾವು
ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
Published: 12th April 2022 01:12 AM | Last Updated: 12th April 2022 01:12 AM | A+A A-

ಗಾಯಾಳುಗಳ ಸಾಗಿಸುತ್ತಿರುವ ಸಿಬ್ಬಂದಿ (ಟ್ವಿಟರ್ ಚಿತ್ರ)
ಅಮರಾವತಿ: ಆಂಧ್ರಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ.
#BreakingNews Five #passengers reportedly died, when they were run over by #Konark Express #train when they got down from #Gauhati Express and were crossing tracks at G Sigadam in #Srikakulam district on #Monday night @NewIndianXpress
— TNIE Andhra Pradesh (@xpressandhra) April 11, 2022
ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಕೊನಾರ್ಕ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ.
5 feared killed & many injured after a speeding train ran over them at #Bathua of G #Sigadam zone in #Srikakulam dist.
— Surya Reddy (@jsuryareddy) April 11, 2022
The passengers got down from Guwahati bound train, when it halt, run over by #KonarkExpress came on adjacent track. #AndhraPradesh @serailwaykol @RailMinIndia pic.twitter.com/LKSuT04g9J
ಮೂಲಗಳ ಪ್ರಕಾರ ಕೊಯಮತ್ತೂರು–ಸಿಲ್ಚಾರ್ ಎಕ್ಸ್‌ಪ್ರೆಸ್ ರೈಲಿನಿಂದ ಸಿಗಡಮ್–ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದಾಗ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ–ಮುಂಬೈ ಕೊನಾರ್ಕ್ ರೈಲು ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ ಹಳಿಯ ಮೇಲಿದ್ದ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಶಾಖಪಟ್ಟಣ-ಪಲಾಸ ಮುಖ್ಯ ಮಾರ್ಗದ ಮಧ್ಯಭಾಗದಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ.