ಹಿಮಾಚಲದ 1,000ಕ್ಕೂ ಬಿಜೆಪಿ ಮುಖಂಡರು ಎಎಪಿ ಸೇರುವುದಕ್ಕೆ ಸಿದ್ಧರಿದ್ದಾರೆ: ಮನೀಶ್ ಸಿಸೋಡಿಯಾ
2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ವಿಜಯ ಆಮ್ ಆದ್ಮಿ ಪಕ್ಷದ ಉತ್ಸಾಹ ಹೆಚ್ಚಿದೆ. ದೆಹಲಿ ಮತ್ತು ಪಂಜಾಬ್‌ನಲ್ಲಿ ಸರ್ಕಾರ ರಚಿಸಿದ ನಂತರ ಹಿಮಾಚಲ ಪ್ರದೇಶದಲ್ಲಿ ಪಕ್ಷವು ಸಂಪೂರ್ಣ ಒತ್ತು ನೀಡಿದೆ.
Published: 14th April 2022 08:59 PM | Last Updated: 14th April 2022 08:59 PM | A+A A-

ಮನೀಶ್ ಸಿಸೋಡಿಯಾ
ನವದೆಹಲಿ: 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ವಿಜಯ ಆಮ್ ಆದ್ಮಿ ಪಕ್ಷದ ಉತ್ಸಾಹ ಹೆಚ್ಚಿದೆ. ದೆಹಲಿ ಮತ್ತು ಪಂಜಾಬ್‌ನಲ್ಲಿ ಸರ್ಕಾರ ರಚಿಸಿದ ನಂತರ ಹಿಮಾಚಲ ಪ್ರದೇಶದಲ್ಲಿ ಪಕ್ಷವು ಸಂಪೂರ್ಣ ಒತ್ತು ನೀಡಿದೆ.
ಹಿಮಾಚಲ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಅಲೆ ಎದ್ದಿದೆ ಎಂದು ಮನೀಶ್ ಸಿಸೋಡಿಯಾ ನಿರಂತರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಭಾರತೀಯ ಜನತಾ ಪಕ್ಷದ ಆಡಳಿತದಿಂದ ಜನರು ಬೇಸರಗೊಂಡಿದ್ದಾರೆ ಮತ್ತು ಆಮ್ ಆದ್ಮಿ ಪಕ್ಷದ ಸರ್ಕಾರ ರಚಿಸಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಜನರಿಗೆ ಬಿಜೆಪಿಯಿಂದ ಯಾವುದೇ ಭರವಸೆ ಇಲ್ಲ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ಸುದ್ದಿಗೋಷ್ಠಿ ನಡೆಸಿ ಹಲವು ವಿಷಯಗಳ ಕುರಿತು ಮಾತನಾಡಿದರು. ಹಿಮಾಚಲ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಕನಿಷ್ಠ 1000 ನಾಯಕರು ಮತ್ತು ಕಾರ್ಯಕರ್ತರು ಆಮ್ ಆದ್ಮಿ ಪಕ್ಷಕ್ಕೆ ಸೇರಲಿದ್ದಾರೆ. ಹಿಮಾಚಲ ಪ್ರದೇಶದ ಬಿಜೆಪಿಯ ಹಲವು ದೊಡ್ಡ ನಾಯಕರು ಕೂಡ ಆಮ್ ಆದ್ಮಿ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ.
ದೆಹಲಿಯ ಶಿಕ್ಷಣ ಸಚಿವರು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇತ್ತೀಚೆಗೆ ಬಿಜೆಪಿ ನಾಯಕ ಹರ್ಮೈಲ್ ಧಿಮಾಲ್ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕೇಸರಿ ಪಕ್ಷದ 1000 ಮುಖಂಡರು ಮತ್ತು ಕಾರ್ಯಕರ್ತರು ಆಮ್ ಆದ್ಮಿ ಪಕ್ಷಕ್ಕೆ ಸೇರಲು ಸಿದ್ಧರಾಗಿದ್ದಾರೆ. ಶೀಘ್ರದಲ್ಲೇ ಅವರು ದೇಶದ ಅತ್ಯಂತ ಪ್ರಾಮಾಣಿಕ ಪಕ್ಷ ಎಎಪಿಗೆ ಸೇರಲಿದ್ದಾರೆ ಎಂದರು.