ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಹೊಂದಿರಲಿದೆ: ಪ್ರಧಾನಿ ಮೋದಿ
ವೈದ್ಯಕೀಯ ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವ ಮೂಲಕ ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
Published: 15th April 2022 03:23 PM | Last Updated: 15th April 2022 03:23 PM | A+A A-

ನರೇಂದ್ರ ಮೋದಿ
ಭುಜ್: ವೈದ್ಯಕೀಯ ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವ ಮೂಲಕ ಭಾರತ ಮುಂದಿನ 10 ವರ್ಷಗಳಲ್ಲಿ ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಭುಜ್ ನಲ್ಲಿ ಶ್ರೀ ಕಚ್ಚಿ ಲೇವಾ ಪಟೇಲ್ ಸಮಾಜ ನಿರ್ಮಿಸಿರುವ 200 ಹಾಸಿಗೆಗಳ ಕೆಕೆ ಪಟೇಲ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.
ಇದನ್ನು ಓದಿ: 'ಪ್ರಧಾನ ಮಂತ್ರಿ ಸಂಗ್ರಹಾಲಯ' ಉದ್ಘಾಟಿಸಿದ ಪಿಎಂ ನರೇಂದ್ರ ಮೋದಿ
ಭೂಕಂಪ ಪೀಡಿತರಾದ ಭುಜ್ ನ ಜನರು ಈಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದಿಗೆ ಹೊಸ ಭವಿಷ್ಯವನ್ನು ಬರೆಯುತ್ತಿದ್ದಾರೆ. ಈ 200 ಹಾಸಿಗೆಗಳ ಆಸ್ಪತ್ರೆಯು ಜನರಿಗೆ ಕೈಗೆಟುಕುವ ಮತ್ತು ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜನ್ನು ನಿರ್ಮಿಸುವ ಗುರಿಯನ್ನು ಹೊಂದಿದ್ದೇವೆ. ಈ ಮೂಲಕ ವೈದ್ಯಕೀಯ ಶಿಕ್ಷಣವು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡುವ ಮೂಲಕ ದೇಶವು 10 ವರ್ಷಗಳ ನಂತರ ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯುವಲ್ಲಿ ಯಶಸ್ವಿಯಾಗಲಿದೆ ಎಂದು ಹೇಳಿದರು.
ಎರಡು ದಶಕಗಳ ಹಿಂದೆ ಗುಜರಾತ್‌ನಲ್ಲಿ ಕೇವಲ ಒಂಬತ್ತು ವೈದ್ಯಕೀಯ ಕಾಲೇಜುಗಳಿದ್ದವು. ಆದರೆ ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಸಾಕಷ್ಟು ಸುಧಾರಿಸಿದೆ ಎಂದು ಪ್ರಧಾನಿ ತಿಳಿಸಿದರು.