ಉತ್ತರಾಖಂಡ್ ಸಿಎಂ ಧಾಮಿಗೆ ತನ್ನ ಶಾಸಕ ಸ್ಥಾನವನ್ನು ಬಿಟ್ಟುಕೊಡಲು ಮುಂದಾದ ಕಾಂಗ್ರೆಸ್ ಶಾಸಕ!
ಉತ್ತರಾಖಂಡ್ ನ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೂ ಸಿಎಂ ಆಗಿರುವ ಕಾರಣ ಈಗ ಅವರು ಶಾಸನ ಸಭೆಗೆ ಆಯ್ಕೆಯಾಗಬೇಕಿದ್ದು, ಅವರು ಸ್ಪರ್ಧಿಸಬೇಕಿರುವ ಕ್ಷೇತ್ರದ ಬಗ್ಗೆ ಬಿಜೆಪಿ ಇನ್ನೂ ನಿರ್ಧರಿಸಿಲ್ಲ.
Published: 15th April 2022 03:02 PM | Last Updated: 15th April 2022 03:02 PM | A+A A-

ಪುಷ್ಕರ್ ಸಿಂಗ್ ಧಾಮಿ
ಡೆಹ್ರಾಡೂನ್: ಉತ್ತರಾಖಂಡ್ ನ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೂ ಸಿಎಂ ಆಗಿರುವ ಕಾರಣ ಈಗ ಅವರು ಶಾಸನ ಸಭೆಗೆ ಆಯ್ಕೆಯಾಗಬೇಕಿದ್ದು, ಅವರು ಸ್ಪರ್ಧಿಸಬೇಕಿರುವ ಕ್ಷೇತ್ರದ ಬಗ್ಗೆ ಬಿಜೆಪಿ ಇನ್ನೂ ನಿರ್ಧರಿಸಿಲ್ಲ.
ಈ ನಡುವೆ ಸಿಎಂ ಪುಷ್ಕರ್ ಸಿಂಗ್ ಧಾಮಿಗೆ ಕಾಂಗ್ರೆಸ್ ನ ಶಾಸಕರೊಬ್ಬರು ತಮ್ಮ ಸ್ಥಾನವನ್ನು ಬಿಟ್ಟುಕೊಡಲು ಮುಂದಾಗಿದ್ದಾರೆ.
ಧರ್ಚುಲಾ ಶಾಸಕ ಹರೀಶ್ ಧಾಮಿ ತಮ್ಮ ಶಾಸಕ ಸ್ಥಾನವನ್ನು ಮುಖ್ಯಮಂತ್ರಿಗಳಿಗೆ ಬಿಟ್ಟುಕೊಡುವ ಮಾತನ್ನಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ಆರೋಪ ಮಾಡಿರುವ ಹರೀಶ್ ಧಾಮಿ, ಪಕ್ಷ ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಪಕ್ಷದ ನಿಷ್ಠಾವಂತ ನಾಯಕರು, ಕಾರ್ಯಕರ್ತರಿಗೆ ಬೆಲೆ ನೀಡಲಾಗುತ್ತಿಲ್ಲ. ಇದರಿಂದ ನೋುಂಟಾಗಿದೆ. ರಾಜ್ಯದ ಅಭಿವೃದ್ಧಿಯ ಉದ್ದೇಶದಿಂದ 2014 ರಲ್ಲಿ ಅಂದಿನ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗಾಗಿ ನನ್ನ ಸ್ಥಾನವನ್ನು ಬಿಟ್ಟುಕೊಟ್ಟಿದೆ. ನನ್ನ ಕ್ಷೇತ್ರದ ಜನತೆ ಅವಕಾಶ ನೀಡಿದಲ್ಲಿ ನಾನು ಈಗ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರಿಗೆ ನನ್ನ ಶಾಸಕ ಸ್ಥಾನವನ್ನು ಬಿಟ್ಟುಕೊಡುತ್ತೇನೆ ಎಂದು ಹರೀಶ್ ಧಾಮಿ ಹೇಳಿದ್ದಾರೆ.
ಇನ್ನು ಬಿಜೆಪಿಯಲ್ಲೇ 6 ಮಂದಿ ಶಾಸಕರು ಸಿಎಂ ಗಾಗಿ ತಮ್ಮ ಶಾಸಕ ಸ್ಥಾನವನ್ನು ತ್ಯಜಿಸಲು ಮುಂದಾಗಿದ್ದಾರೆ. ಆದರೆ ಸಿಎಂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಬಿಜೆಪಿ ಇನ್ನಷ್ಟೇ ನಿರ್ಧರಿಸಬೇಕಿದೆ.