ದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಶುಭಾಶಯ
ದೇಶದಾದ್ಯಂತ ಹನುಮ ಜಯಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಜನರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
Published: 16th April 2022 12:42 PM | Last Updated: 16th April 2022 12:42 PM | A+A A-

ಪ್ರಧಾನಿ ಮೋದಿ
ನವದೆಹಲಿ: ದೇಶದಾದ್ಯಂತ ಹನುಮ ಜಯಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಜನರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಕ್ತಿ, ಧೈರ್ಯ ಮತ್ತು ಸಂಯಮದ ಸಂಕೇತವಾದ ಭಗವಾನ್ ಹನುಮಾನ್ ಅವರ ಜನ್ಮ ವಾರ್ಷಿಕೋತ್ಸವದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು. ಪವನಪುತ್ರನ ಅನುಗ್ರಹದಿಂದ ಪ್ರತಿಯೊಬ್ಬರ ಜೀವನವು ಯಾವಾಗಲೂ ಶಕ್ತಿ, ಬುದ್ಧಿವಂತಿಕೆ ಮತ್ತು ಜ್ಞಾನದಿಂದ ತುಂಬಿರಲಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ, ಎಲ್ಲರಿಗೂ ಹನುಮ ಜಯಂತಿಯ ಶುಭಾಶಯಗಳು ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಭಕ್ತ ಜನತೆಗೆ ರಾಮಭಕ್ತ ಹನುಮಂತನ ಜಯಂತಿಯ ಶುಭಕಾಮನೆಗಳು. ನಾಡಿನಲ್ಲಿ ಧರ್ಮ, ಆರೋಗ್ಯ, ಸಂತೃಪ್ತಿ, ಸಮೃದ್ಧಿ ಸದಾ ನೆಲೆಸಲಿ, ಎಲ್ಲಾ ದುರಿತಗಳು ದೂರಾಗುವಂತೆ ಆಂಜನೇಯ ಸ್ವಾಮಿಯ ಕೃಪೆ ಸದಾ ಇರಲಿ ಎಂದು ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.
ಜಾತಿ, ಮತ, ಬೇಧಗಳಿಂದ ಮುಕ್ತನಾದ ಪವನಪುತ್ರ ಹನುಮ ಜಯಂತಿಯ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ಭಜರಂಗಬಲಿಯ ಆಶೀರ್ವಾದಕ್ಕೆ ಎಲ್ಲರೂ ಪಾತ್ರರಾಗಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.
ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಶುಭಾಶಯಗಳು. ಶ್ರದ್ಧೆ, ಭಕ್ತಿ, ನಿಷ್ಠೆಯ ಪ್ರತೀಕವಾದ ಶ್ರೀರಾಮಭಕ್ತ ಶ್ರೀ ಆಂಜನೇಯಸ್ವಾಮಿ ಸ್ಮರಣೆಯಿಂದ ಸಕಲ ಕಷ್ಟಗಳೆಲ್ಲ ಹರಣವಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.