ಜಹಂಗೀರ್ ಪುರಿ ಘರ್ಷಣೆ: ಧಾರ್ಮಿಕ ಮೆರವಣಿಗೆ ನಡೆಸಿದ ವಿಹೆಚ್ ಪಿ, ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು, ಓರ್ವ ಬಂಧನ
ಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.
Published: 18th April 2022 08:28 PM | Last Updated: 18th April 2022 08:33 PM | A+A A-

ವಿಶ್ವ ಹಿಂದೂ ಪರಿಷತ್ ಸಾಂದರ್ಭಿಕ ಚಿತ್ರ
ನವದೆಹಲಿ: ಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.
ಜಹಂಗೀರ್ ಪುರಿಯಲ್ಲಿ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸೇವಾ ಪ್ರಮುಖ ಪ್ರೇಮ್ ಶರ್ಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಜಹಂಗೀರ್ ಪುರಿ ಹಿಂಸಾಚಾರ: ಇಬ್ಬರು ಅಪ್ರಾಪ್ತರು ಸೇರಿದಂತೆ 22 ಮಂದಿಯನ್ನು ಬಂಧಿಸಿದ ದೆಹಲಿ ಪೊಲೀಸರು
ಐಪಿಸಿ ಸೆಕ್ಷನ್ 188 ರ ಅಡಿ ಕೇಸ್ ದಾಖಲಿಸಲಾಗಿದೆ ಎಂದು ವಾಯುವ್ಯ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ತಿಳಿಸಿದ್ದಾರೆ.
ಯಾವುದೇ ಅನುಮತಿ ಇಲ್ಲದೆ ಶನಿವಾರ ಸಂಜೆ ಹನುಮ ಜಯಂತಿ ಮೆರವಣಿಗೆ ನಡೆಸಲಾಗಿದೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸೇವಾ ಪ್ರಮುಖ ಪ್ರೇಮ್ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ತನಿಖೆ ಪ್ರಗತಿಯಲ್ಲಿರುವುದಾಗಿ ಅವರು ತಿಳಿಸಿದ್ದಾರೆ.