
ಸಂಗ್ರಹ ಚಿತ್ರ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಭಾರತೀಯ ಸೇನೆ ಸೋಮವಾರ ಬಂಧಿಸಿದೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸೇನೆ ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್-ಎ-ತೊಯ್ಬಾದ ಭಯೋತ್ಪಾದಕನನ್ನು ಬಂಧಿಸಿವೆ.
Jammu & Kashmir Police along with Army and CRPF arrest one LeT terrorist in Bandipora.
— ANI (@ANI) April 18, 2022
ಏಪ್ರಿಲ್ 3 ರಂದು, ಭದ್ರತಾ ಪಡೆಗಳು ಲಷ್ಕ್-ಎ-ತೈಬಾದ ಮಾಡ್ಯೂಲ್ ಅನ್ನು ಭೇದಿಸಿ ಐವರು ಭಯೋತ್ಪಾದಕರನ್ನು ಬಂಧಿಸಿತ್ತು. ಬಂಧಿತರನ್ನು ಇರ್ಫಾನ್ ಅಹ್ಮದ್ ಭಟ್, ಇರ್ಫಾನ್ ಅಹ್ಮದ್ ಜಾನ್, ಸಜ್ಜದ್ ಅಹ್ಮದ್ ಮಿರ್ ಮತ್ತು ಶಾರಿಕ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿತ್ತು. ಇವರಿಂದ ಚೀನಾ ನಿರ್ಮಿತ ಎರಡು ಗ್ರೆನೇಡ್‌ಗಳು ಮತ್ತು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇವರೆಲ್ಲರೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲವನ್ನು ಒದಗಿಸುತ್ತಿದ್ದರು ಎಂದು ಪೊಲೀಸ್ ವಕ್ತಾರರು ತಿಳಿಸಿದ್ದರು.
ಇಲ್ಲಿ ದೊರೆತ ಸಾಕ್ಷ್ಯಾಧಾರಗಳು ಮತ್ತು ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಭಯೋತ್ಪಾದಕ ಸಂಘಟನೆಗೆ ಸೇರಿದ ಮತ್ತೋರ್ವ ಉಗ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.