ಹಿಂದೂ ದಂಪತಿಗಳು ನಾಲ್ಕು ಮಕ್ಕಳು ಹಡೆಯಿರಿ; ಅದರಲ್ಲಿ ಎರಡನ್ನು ದೇಶಕ್ಕೆ ಸಮರ್ಪಿಸಿ: ಸಾಧ್ವಿ ರಿತಂಬರ

ಪ್ರತಿ ಹಿಂದೂ ದಂಪತಿಗಳು ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಮತ್ತು ಅವರಲ್ಲಿ ಇಬ್ಬರನ್ನು ದೇಶಕ್ಕೆ ಅರ್ಪಿಸಬೇಕು. ಆಗ ಭಾರತವು ಶೀಘ್ರದಲ್ಲೇ ಹಿಂದೂ ರಾಷ್ಟ್ರ ಆಗಲಿದೆ ಎಂದು ಹಿಂದುತ್ವದ ನಾಯಕಿ, ವಿಶ್ವ ಹಿಂದೂ ಪರಿಷತ್ತಿನ ಮಹಿಳಾ ವಿಭಾಗ ದುರ್ಗಾ ವಾಹಿನಿಯ ಸಂಸ್ಥಾಪಕಿ ಸಾಧ್ವಿ ರಿತಂಬರ ಹೇಳಿದ್ದಾರೆ.

Published: 18th April 2022 05:33 PM  |   Last Updated: 18th April 2022 05:33 PM   |  A+A-


ಸಾಧ್ವಿ ರಿತಂಬರ

PTI

ಕಾನ್ಪುರ್/ಲಖನೌ: ಪ್ರತಿ ಹಿಂದೂ ದಂಪತಿಗಳು ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕು ಮತ್ತು ಅವರಲ್ಲಿ ಇಬ್ಬರನ್ನು ದೇಶಕ್ಕೆ ಅರ್ಪಿಸಬೇಕು. ಆಗ ಭಾರತವು ಶೀಘ್ರದಲ್ಲೇ ಹಿಂದೂ ರಾಷ್ಟ್ರ ಆಗಲಿದೆ ಎಂದು ಹಿಂದುತ್ವದ ನಾಯಕಿ, ವಿಶ್ವ ಹಿಂದೂ ಪರಿಷತ್ತಿನ ಮಹಿಳಾ ವಿಭಾಗ ದುರ್ಗಾ ವಾಹಿನಿಯ ಸಂಸ್ಥಾಪಕಿ ಸಾಧ್ವಿ ರಿತಂಬರ ಹೇಳಿದ್ದಾರೆ.

ಭಾನುವಾರ ಇಲ್ಲಿನ ನಿರಾಲಾ ನಗರದಲ್ಲಿ ರಾಮ ಮಹೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಮಹಿಳೆಯರು “ಹಮ್ ದೋ, ಹಮಾರೆ ದೋ” (ಎರಡು ಮಕ್ಕಳನ್ನು ಹೊಂದುವುದು) ಎಂಬ ತತ್ವವನ್ನು ಅನುಸರಿಸುತ್ತಾರೆ. ನಾನು ಎಲ್ಲಾ ಹಿಂದೂ ದಂಪತಿಗಳು ತಲಾ ನಾಲ್ಕು ಮಕ್ಕಳನ್ನು ಹೊಂದಬೇಕು. ಇವರಲ್ಲಿ ಇಬ್ಬರನ್ನು ದೇಶಕ್ಕೆ, ಉಳಿದ ಇಬ್ಬರನ್ನು ಕುಟುಂಬಕ್ಕಾಗಿ ಸಮರ್ಪಿಸಬೇಕು. ಶೀಘ್ರದಲ್ಲೇ ಭಾರತವು ಹಿಂದೂ ರಾಷ್ಟ್ರವಾಗಲಿದೆ ಎಂದು ಹೇಳಿದರು ಎಂದು ಹೇಳಿದರು.

ಅಲ್ಲದೇ ಜನಸಂಖ್ಯೆಯ ಅಸಮತೋಲನವಾಗದಂತೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಬೇಕು. ದೇಶದಲ್ಲಿ ಜನಸಂಖ್ಯಾ ಅಸಮತೋಲನ ಉಂಟಾದರೆ ದೇಶದ ಭವಿಷ್ಯ ಉತ್ತಮವಾಗಿರುವುದಿಲ್ಲ ಎಂದರು.

ದೆಹಲಿಯ ಜಹಾಂಗೀರಪುರಿಯಲ್ಲಿ ಶನಿವಾರ ನಡೆದ ಕೋಮು ಹಿಂಸಾಚಾರವನ್ನು ಉಲ್ಲೇಖಿಸಿದ ಅವರು, ಹನುಮ ಜಯಂತಿ ಶೋಭಾ ಯಾತ್ರೆ (ಮೆರವಣಿಗೆ) ಮೇಲೆ ದಾಳಿ ಮಾಡಿದವರು ದೇಶದ ಪ್ರಗತಿಯ ಬಗ್ಗೆ ಅಸೂಯೆ ಹೊಂದಿದವರು. ರಾಜಕೀಯ ಭಯೋತ್ಪಾದನೆಯ ಮೂಲಕ ಹಿಂದೂ ಸಮಾಜವನ್ನು ಒಡೆಯಲು ಯತ್ನಿಸುತ್ತಿರುವವರನ್ನು ಮಣ್ಣು ಮುಕ್ಕಿಸಲಾಗುತ್ತದೆ ಎಂದು ಅವರು ಹೇಳಿದರು.


Stay up to date on all the latest ರಾಷ್ಟ್ರೀಯ news
Poll
BS yediyurappa

ಬಿಜೆಪಿ ಸಂಸದೀಯ ಮಂಡಳಿಗೆ ಬಿ.ಎಸ್. ಯಡಿಯೂರಪ್ಪ ಸೇರ್ಪಡೆಯಿಂದ 2023 ರ ಕರ್ನಾಟಕ ಚುನಾವಣೆಯಲ್ಲಿ ಪಕ್ಷಕ್ಕೆ ನೆರವಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp