ಬಾರಾಮುಲ್ಲ ಎನ್ಕೌಂಟರ್: ಮೋಸ್ಟ್ ವಾಂಟೆಡ್ ಉಗ್ರ ಕಾಂಟ್ರೂ ಸೇರಿ ಮೃತ ಉಗ್ರರ ಸಂಖ್ಯೆ 4ಕ್ಕೆ ಏರಿಕೆ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾ ಎನ್ಕೌಂಟಕ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಯೂಸುಫ್ ಕಾಂಟ್ರೂ ಸೇರಿ ನಾಲ್ಕು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಸೇನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Published: 22nd April 2022 09:14 AM  |   Last Updated: 22nd April 2022 01:19 PM   |  A+A-


Baramulla Encounter

ಬಾರಾಮುಲ್ಲ ಎನ್ಕೌಂಟರ್

ANI

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾ ಎನ್ಕೌಂಟಕ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಯೂಸುಫ್ ಕಾಂಟ್ರೂ ಸೇರಿ ನಾಲ್ಕು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಸೇನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾರಾಮುಲ್ಲಾದ ಮಾಲ್ವಾ ಗ್ರಾಮದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ ವೇಳೆ ಉಗ್ರರು ಮತ್ತು ಭದ್ರತಾ ಪಡೆ ನಡುವೆ ಗುಂಡಿನ ಕಾಳಗ ನಡೆದಿದೆ. ಪಡೆಗಳ ಜಂಟಿ ತಂಡವು ಶಂಕಿತ ಸ್ಥಳವನ್ನು ಸುತ್ತುವರಿಯುತ್ತಿದ್ದಂತೆ, ಅಡಗಿಕೊಂಡಿದ್ದ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿ ಮೂವರು ಯೋಧರನ್ನು ಗಾಯಗೊಳಿಸಿದ್ದಾರೆ. ನಂತರದ ಗುಂಡಿನ ಚಕಮಕಿಯಲ್ಲಿ ಇದುವರೆಗೆ ಉನ್ನತ ಸ್ಥಳೀಯ ಕಮಾಂಡರ್ ಸೇರಿದಂತೆ 4 ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಮಾಲ್ವಾ ಗ್ರಾಮದಲ್ಲಿ ನಡೆದ ಆರಂಭಿಕ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು. ಆದರೆ ಕಾರ್ಯಾಚರಣೆ ಮುಂದುವರೆದು ಬಾರಾಮುಲ್ಲಾದಲ್ಲೂ ಉಗ್ರರ ಇರುವಿಕೆ ಪತ್ತೆ ಮಾಡಿದ ಸೇನೆ ಅಲ್ಲಿಯೂ ಕಾರ್ಯಾಚರಣೆ ನಡೆಸಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ  ಲಷ್ಕರ್-ಎ-ತೊಯ್ಬಾದ ಮೋಸ್ಟ್ ವಾಂಟೆಡ್ ಉಗ್ರಗಾಮಿ ಕಮಾಂಡರ್ ಯೂಸುಫ್ ಕಾಂಟ್ರೂ ಸೇರಿದಂತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇಂದು ಕೂಡ ಮತ್ತೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಆ ಮೂಲಕ ಕಾರ್ಯಾಚರಣೆಯಲ್ಲಿ ಮೃತರಾದ ಉಗ್ರರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮ, 4 ಮಂದಿಗೆ ಗಾಯ

ಈ ಕುರಿತು ಮಾಹಿತಿ ನೀಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವರಿಷ್ಠಾಧಿಕಾರಿಗಳು, ಉಗ್ರ ಯೂಸುಫ್ ಕಾಂಟ್ರೂ ಬ್ಲಾಕ್ ಡೆವಲಪ್ ಮೆಂಟ್ ಕೌನ್ಸಿಲ್ ಅಧ್ಯಕ್ಷರು, ಕಾಶ್ಮೀರಿ ಸೈನಿಕರು, ವಿಶೇಷ ಪೊಲೀಸ್ ಅಧಿಕಾರಿ ಮತ್ತು ಬದ್ಗಾಮ್ ಜಿಲ್ಲೆಯ ಅವರ ಸಹೋದರ ಸೇರಿದಂತೆ ಸರಣಿ ಹತ್ಯೆಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಿದ್ದಾರೆ. ಅಲ್ಲದೆ ಬಿಡಿಸಿ ಅಧ್ಯಕ್ಷ ಸರ್ದಾರ್ ಭೂಪಿಂದರ್ ಸಿಂಗ್ ಅವರನ್ನು ಸೆಪ್ಟೆಂಬರ್ 23, 2020 ರಂದು ಖಾಗ್ ಪ್ರದೇಶದ ಅವರ ಸ್ವಂತ ಸ್ಥಳದಲ್ಲಿ ಕಾಂಟ್ರೂ ಹತ್ಯೆಗೈದಿದ್ದ ಎಂದು ಐಜಿಪಿ ಹೇಳಿದ್ದಾರೆ.

ಎಲ್ಇಟಿಯ ಉನ್ನತ ಕಮಾಂಡರ್ ಹತ್ಯೆಯನ್ನು ದೊಡ್ಡ ಯಶಸ್ಸು ಎಂದು ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ಆಫ್ ಪೋಲಿಸ್ ವಿಜಯ್ ಕುಮಾರ್ ಬಣ್ಣಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
MoE to launch bachelor degree programme for Agniveers

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಸರಿಯಾಗಿ ಯೋಜಿಸಲಾಗಿಲ್ಲ ಎಂಬ ಟೀಕೆಗಳನ್ನು ನೀವು ಒಪ್ಪುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp