ಹನುಮಾನ್ ಚಾಲೀಸಾ ಪ್ರಕರಣ: ಸಂಸದೆ ನವನೀತ್ ರಾಣಾ ವಿರುದ್ಧ ಶಿವಸೇನೆ ಪ್ರತಿಭಟನೆ
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್ ರಾಣ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
Published: 23rd April 2022 12:23 PM | Last Updated: 23rd April 2022 01:32 PM | A+A A-

ಶಿವಸೇನೆ
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್ ರಾಣ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಶಾಸಕನ ನಿವಾಸದ ಎದುರು ಹಾಕಲಾಗಿದ್ದ ಬ್ಯಾರಿಕೇಡ್ ಗಳನ್ನು ಮುರಿದು ಮನೆಗೆ ನುಗ್ಗುವುದಕ್ಕೆ ಶಿವಸೇನೆ ಕಾರ್ಯಕರ್ತರು ಯತ್ನಿಸಿದ್ದಾರೆ.
ಇದನ್ನೂ ಓದಿ: ಧ್ವನಿವರ್ಧಕ ಬಳಕೆಗೆ ರಾಷ್ಟ್ರೀಯ ನೀತಿ ರಚಿಸಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಜಾರಿಗೆ ತನ್ನಿ: ಕೇಂದ್ರ ಸರ್ಕಾರಕ್ಕೆ ಶಿವಸೇನೆ ಸವಾಲು
ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಪಕ್ಷದ ಕಾರ್ಯಕರ್ತರು ಮುನ್ನುಗುವುದನ್ನು ತಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರೀ ಬಳಿ ಹನುಮಾನ್ ಚಾಲಿಸಾ ಪಠಿಸುವುದಾಗಿ ರಾಣ ಅವರು ಹೇಳಿದ್ದರು. ಇದಕ್ಕೆ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.