ಜಮ್ಮು-ಕಾಶ್ಮೀರ: ಪ್ರಧಾನಿ ಮೋದಿ ರ್ಯಾಲಿ ಸ್ಥಳದಿಂದ 12 ಕಿ.ಮೀ ದೂರದಲ್ಲಿ ಸ್ಫೋಟ, ಹೆಚ್ಚಿದ ಆತಂಕ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ನಡುವಲ್ಲೇ ಮೋದಿಯವರು ಪಾಲ್ಗೊಳ್ಳಬೇಕಿದ್ದ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟವೊಂದು ಸಂಭವಿಸಿದೆ ಎಂದು ತಿಳಿದುಬಂದಿದೆ.

Published: 24th April 2022 09:10 AM  |   Last Updated: 24th April 2022 09:17 AM   |  A+A-


Jammu police

ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರು.

Online Desk

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ನಡುವಲ್ಲೇ ಮೋದಿಯವರು ಪಾಲ್ಗೊಳ್ಳಬೇಕಿದ್ದ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟವೊಂದು ಸಂಭವಿಸಿದೆ ಎಂದು ತಿಳಿದುಬಂದಿದೆ.

ಜಮ್ಮುವಿನ ಬಿಷ್ನಾಹ್‌ನ ಲಾಲಿಯನ್‌ ಗ್ರಾಮದ ಬಯಲು ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಸ್ಫೋಟ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಹಾಗೂ ಭದ್ರತಾ ಪಡೆಗಳು ಧಾವಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕವನ್ನು ಸ್ಥಾಪಿಸಲು ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗ ಮಾರ್ಗವನ್ನು ತೆರೆಯುವುದು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 20,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ನೆರವೇರಿಸಲಿದ್ದಾರೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಮತ್ತು ದೇಶಾದ್ಯಂತ 'ಗ್ರಾಮ ಸಭೆ'ಗಳನ್ನು ಉದ್ದೇಶಿಸಿ ಮಾತನಾಡಲು ಮೋದಿ ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.

ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸಲು ಮತ್ತು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವ ಪ್ರಧಾನಿಯವರು 'ಅಮೃತ ಸರೋವರ' ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ ಎಂದು ಅದು ತಿಳಿಸಿದೆ.

ನಂತರ ಮುಂಬೈನಲ್ಲಿ ನಡೆಯಲಿರುವ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋದಿ ಅವರು ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅನುಕರಣೀಯ ಕೊಡುಗೆ ನೀಡಿದ ವ್ಯಕ್ತಿಗೆ ಪ್ರತಿ ವರ್ಷ ನೀಡಲಾಗುವುದು ಎಂದು ಹೇಳಿದೆ.


Stay up to date on all the latest ರಾಷ್ಟ್ರೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp