ಕಾಂಗ್ರೆಸ್ ನಿಂದ 'ಎಂಪವರ್ಡ್ ಆ್ಯಕ್ಷನ್ ಗ್ರೂಪ್-2024' ರಚನೆ, ಪ್ರಶಾಂತ್ ಕಿಶೋರ್ ಸೇರ್ಪಡೆ ಬಗ್ಗೆ ಸ್ಪಷ್ಟತೆ ಇಲ್ಲ
2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸಲು 'ಎಂಪವರ್ಡ್ ಆ್ಯಕ್ಷನ್ ಗ್ರೂಪ್-2024' ರಚಿಸುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಆದರೆ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ....
Published: 25th April 2022 07:29 PM | Last Updated: 25th April 2022 07:29 PM | A+A A-

ಸೋನಿಯಾ ಗಾಂಧಿ - ಪ್ರಶಾಂತ್ ಕಿಶೋರ್
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಿದ್ಧಗೊಳಿಸಲು 'ಎಂಪವರ್ಡ್ ಆ್ಯಕ್ಷನ್ ಗ್ರೂಪ್-2024' ರಚಿಸುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ. ಆದರೆ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾವುದೇ ಸ್ಪಷ್ಟತೆ ನೀಡಿಲ್ಲ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೇ 13 ರಿಂದ 15 ರ ವರೆಗೆ ರಾಜಸ್ಥಾನದ ಉದಯಪುರದಲ್ಲಿ ಚಿಂತನ-ಮಂಥನ ಅಧಿವೇಶನ ಕರೆಯಲು ನಿರ್ಧರಿಸಿದ್ದಾರೆ. ಅಲ್ಲಿ ದೇಶಾದ್ಯಂತದ ಪಕ್ಷದ ನಾಯಕರು ಎದುರಿಸುತ್ತಿರುವ ಆಂತರಿಕ ಸಮಸ್ಯೆಗಳ ಕುರಿತು ಚರ್ಚಿಸಿ ಸಂಘಟನೆಯನ್ನು ಬಲಪಡಿಸಲು ಪರಿಹಾರ ಕಂಡುಕೊಳ್ಳಲಾಗುವುದು. ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲಾಗುವುದು ಎಂದು ಪಕ್ಷದ ಮುಖ್ಯ ವಕ್ತಾರ ರಂದೀಪ್ ಸುರ್ಜೇವಾಲಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದನ್ನು ಓದಿ: ಪ್ರಶಾಂತ್ ಕಿಶೋರ್ ದೊಡ್ಡ ಯೋಜನೆ: 2024ರ ವಿಜಯಕ್ಕಾಗಿ 'ಕಾಂಗ್ರೆಸ್ ಗೆ ಮರುಹುಟ್ಟು'!
ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಾಗಿದೆ? ಎಂಬ ವರದಿಗಾರರ ಪ್ರಶ್ನೆಗೆ ನೇರ ಉತ್ತರ ನೀಡದ ಸುರ್ಜೇವಾಲಾ, ಆ್ಯಕ್ಷನ್ ಗ್ರೂಪ್ ರಚಿಸಿದಾಗ, ಅದರಲ್ಲಿ ಯಾರಿದ್ದಾರೆ ಎಂಬುದು ನಿಮಗೇ ತಿಳಿಯುತ್ತದೆ ಎಂದರು.
ಪ್ರಶಾಂತ್ ಕಿಶೋರ್ ಅವರು ಮಂಡಿಸಿದ ಯೋಜನೆ ಸೇರಿದಂತೆ ಮುಂದಿನ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕಾರ್ಯತಂತ್ರವನ್ನು ರೂಪಿಸಲು ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಸತತ ಸೋಲಿನ ಹಿನ್ನಲೆಯಲ್ಲಿ ಮುಂಬರುವ ಚುನಾವಣೆಗೆ ರಣತಂತ್ರ ರೂಪಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ.