ಪ್ರಧಾನಿ ಮೋದಿ ವಿರುದ್ಧ ಪೋಸ್ಟ್: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಕೊನೆಗೂ ಜಾಮೀನು ದೊರೆತಿದೆ.
Published: 25th April 2022 04:09 PM | Last Updated: 25th April 2022 04:50 PM | A+A A-

ಜಿಗ್ನೇಶ್ ಮೇವಾನಿ
ಗುವಾಹತಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಕೊನೆಗೂ ಜಾಮೀನು ದೊರೆತಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿರುವ ಪ್ರಕರಣದಲ್ಲಿ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರಿಗೆ ಅಸ್ಸಾಂ ನ್ಯಾಯಾಲಯ ಜಾಮೀನು ನೀಡಿದ್ದು, ನಿನ್ನೆ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು.
Arrested Gujarat MLA Jignesh Mevani Jignesh Mevani was granted bail by a local court of Kokrajhar today: Advocate Angshuman Bora, lawyer of Jignesh Mevani to ANI
— ANI (@ANI) April 25, 2022
ಅಸ್ಸಾಂನ ಕೊಕ್ರಜಾರ್ನ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಮೇವಾನಿ ವಿರುದ್ಧ ದೂರು ದಾಖಲಿಸಿದ ನಂತರ ಅಸ್ಸಾಂ ಪೊಲೀಸರ ತಂಡವು ಗುರುವಾರ ಗುಜರಾತ್ನ ಪಾಲನ್ಪುರದಿಂದ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿದ್ದರು. ಪ್ರಧಾನಿ ಮೋದಿಯವರ ಸಾಮಾನ್ಯ ವಿಮರ್ಶಕರಾದ ಮೇವಾನಿ ಅವರ ಬಂಧನವನ್ನು "PMO (ಪ್ರಧಾನಿ ಕಚೇರಿ) ನಿಂದ ಸೇಡಿನ ರಾಜಕೀಯ" ಎಂದು ವಿಪಕ್ಷಗಳು ಟೀಕಿಸಿದ್ದವು.
ಇದನ್ನೂ ಓದಿ: ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಬಂಧನ: ಗುಜರಾತ್ ನಿಂದ ಅಸ್ಸಾಂಗೆ ಕರೆತಂದ ಪೊಲೀಸರು
ಇದೇ ವಿಚಾರವಾಗಿ ಈ ಹಿಂಗೆ ಮಾತನಾಡಿದ್ದ ಜಿಗ್ನೇಶ್ ಮೇವಾನಿ, 'ಇದು ಬಿಜೆಪಿ ಮತ್ತು ಆರ್ಎಸ್ಎಸ್ನ ಷಡ್ಯಂತ್ರ. ಅವರು ನನ್ನ ವರ್ಚಸ್ಸನ್ನು ಹಾಳುಮಾಡಲು ಈ ರೀತಿ ವ್ಯವಸ್ಥಿತವಾಗಿ ಪಿತೂರಿ ಮಾಡುತ್ತಿದ್ದಾರೆ. ಇದೇ ರೀತಿಯ ಷಡ್ಯಂತ್ರವನ್ನು ಅವರು ರೋಹಿತ್ ವೇಮುಲಾಗೆ ಮಾಡಿದ್ದರು, ಚಂದ್ರಶೇಖರ್ ಆಜಾದ್ ಅವರ ಮೇಲೂ ಷಡ್ಯಂತ್ರ ಪ್ರಯೋಗಿಸಿದ್ದರು. ಈಗ ಅವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ ಮೇವಾನಿ ಕಿಡಿಕಾರಿದ್ದರು.
41 ವರ್ಷ ವಯಸ್ಸಿನ ಮೇವಾನಿ ಮೇಲೆ ಕ್ರಿಮಿನಲ್ ಪಿತೂರಿ, ಪೂಜಾ ಸ್ಥಳಕ್ಕೆ ಸಂಬಂಧಿಸಿದ ಅಪರಾಧ, ಧಾರ್ಮಿಕ ಭಾವನೆಗಳಿ ಧಕ್ಕೆ ತಂದಿರುವುದು. ಮತ್ತು ಶಾಂತಿ ಭಂಗಕ್ಕೆ ಕಾರಣವಾಗಬಹುದಾದ ಪ್ರಚೋದನೆಯ ಆರೋಪಗಳನ್ನು ಹೊರಿಸಿ ಬಂಧಿಸಲಾಗಿತ್ತು.