ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು; ಆದರೆ ಮತ್ತೊಂದು ಪ್ರಕರಣದಲ್ಲಿ ಮತ್ತೆ ಬಂಧನ

ಜಾಮೀನು ಪಡೆದು ಜೈಲಿಂದ ಹೊರಬಂದ ಕೆಲವೇ ಕ್ಷಣದಲ್ಲಿ ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಮತ್ತೊಂದು ಪ್ರಕರಣದಲ್ಲಿ ಸೋಮವಾರ ಮತ್ತೆ ಬಂಧಿಸಲಾಗಿದೆ.

Published: 25th April 2022 07:41 PM  |   Last Updated: 25th April 2022 07:41 PM   |  A+A-


Scribes boycott Dalit leader Jignesh Mevani meet in Chennai after he asks TV channel to leave

ಜಿಗ್ನೇಶ್ ಮೇವಾನಿ

Online Desk

ಗುವಾಹಟಿ: ಜಾಮೀನು ಪಡೆದು ಜೈಲಿಂದ ಹೊರಬಂದ ಕೆಲವೇ ಕ್ಷಣದಲ್ಲಿ ಗುಜರಾತ್ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಮತ್ತೊಂದು ಪ್ರಕರಣದಲ್ಲಿ ಸೋಮವಾರ ಮತ್ತೆ ಬಂಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ಮೇವಾನಿ ಅವರು ಅಸ್ಸಾಂನ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಆದರೆ ಇದರ ಬೆನ್ನಲ್ಲೇ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಹೊಸ ಪ್ರಕರಣದಲ್ಲಿ ಇಂದು ಮತ್ತೆ ಬಂಧಿಸಲಾಗಿದೆ. ಟ್ವೀಟ್ ಪ್ರಕರಣದಲ್ಲಿ ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಲಯ ನಿನ್ನೆ ಕಾಯ್ದಿರಿಸಿತ್ತು.

ಇದನ್ನು ಓದಿ: ಪ್ರಧಾನಿ ಮೋದಿ ವಿರುದ್ಧ ಪೋಸ್ಟ್: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಜಾಮೀನು

ಮೇವಾನಿ ಅವರನ್ನು ಬಂಧಿಸಲು ಬಂದಿದ್ದ ಅಸ್ಸಾಂನ ಬರ್ಪೇಟಾ ಪೊಲೀಸರು ಗುಜರಾತ್ ಶಾಸಕನನ್ನು ಯಾವ ಪ್ರಕರಣದಲ್ಲಿ ಮತ್ತೆ ಬಂಧಿಸಲಾಗಿದೆ ಎಂದು ತಿಳಿಸಿಲ್ಲ.

ಅಸ್ಸಾಂನ ಕೊಕ್ರಜಾರ್‌ನ ಸ್ಥಳೀಯ ಬಿಜೆಪಿ ನಾಯಕರೊಬ್ಬರು ಅವರ ವಿರುದ್ಧ ದೂರು ದಾಖಲಿಸಿದ ನಂತರ ಅಸ್ಸಾಂ ಪೊಲೀಸರ ತಂಡವು ಗುರುವಾರ ಗುಜರಾತ್‌ನ ಪಾಲನ್‌ಪುರದಿಂದ ಜಿಗ್ನೇಶ್ ಮೇವಾನಿ ಅವರನ್ನು ಮೊದಲ ಬಾರಿಗೆ ಬಂಧಿಸಿತ್ತು.

“ಇದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಷಡ್ಯಂತ್ರ. ಅವರು ನನ್ನ ವರ್ಚಸ್ಸನ್ನು ಹಾಳುಮಾಡಲು ಇದನ್ನು ವ್ಯವಸ್ಥಿತವಾಗಿ ಮಾಡುತ್ತಿದ್ದಾರೆ. ಅವರು ಹಿಂದೆ ರೋಹಿತ್ ವೇಮುಲಾಗೆ, ಚಂದ್ರಶೇಖರ್ ಆಜಾದ್‌ಗೆ ಇದೇ ರೀತಿ ಮಾಡಿದರು, ಈಗ ನನ್ನನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಜಿಗ್ನೇಶ್ ಮೇವಾನಿ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.


Stay up to date on all the latest ರಾಷ್ಟ್ರೀಯ news
Poll
RBI

ರೈತರಿಗೆ ಕೃಷಿ ಸಾಲ ನೀಡಲು CIBIL ಸ್ಕೋರ್ ಪರಿಗಣಿಸುವ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನೀತಿ ಸರಿಯೇ?


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp