ಹನುಮಾನ್ ಚಾಲೀಸ ವಿವಾದ: ರಾಣಾ ದಂಪತಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ...
Published: 25th April 2022 09:58 PM | Last Updated: 26th April 2022 01:40 PM | A+A A-

ಸಂಸದೆ ನವನೀತ್ ರಾಣಾ, ಶಾಸಕ ರವಿ ರಾಣಾ
ಮುಂಬೈ: ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಪೊಲೀಸ್ ಅಧಿಕಾರಿಯ ಅಧಿಕೃತ ಕರ್ತವ್ಯ ನಿರ್ವಹಿಸದಂತೆ ತಡೆದ ಆರೋಪದ ಮೇಲೆ ನಗರದ ಖಾರ್ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ರಾಣಾ ದಂಪತಿ ಇಂದು ಬೆಳಗ್ಗೆ ಹೈಕೋರ್ಟ್ಗೆ ಮೊರೆ ಹೋಗಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪಿಬಿ ವರಾಳೆ ಮತ್ತು ಎಸ್ಎಂ ಮೋದಕ್ ಅವರ ಪೀಠ, ಅರ್ಜಿದಾರರು ಸಾರ್ವಜನಿಕ ಹೊಂದಿದ್ದು, ಇತರರಿಗಿಂತ ಹೆಚ್ಚು ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ಇತರ ಸಾರ್ವಜನಿಕ ವ್ಯಕ್ತಿಗಳಿಗೆ ಗೌರವವನ್ನು ತೋರಿಸಬೇಕು ಎಂದು ಹೇಳಿದೆ.
ಇದನ್ನು ಓದಿ: ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿ ಮೇಲೆ ದೇಶದ್ರೋಹ ಪ್ರಕರಣ ದಾಖಲು
"ಸಾಮಾನ್ಯವಾಗಿ ಹೇಳುವಂತೆ, ದೊಡ್ಡ ಶಕ್ತಿಯೊಂದಿಗೆ ದೊಡ್ಡ ಜವಾಬ್ದಾರಿ ಬರುತ್ತದೆ" ಎಂದು ಹೇಳಿದ ನ್ಯಾಯಮೂರ್ತಿಗಳಾದ ಪಿ ಬಿ ವರಾಲೆ ಮತ್ತು ಎಸ್ ಎಂ ಮೋದಕ್ ಅವರ ಪೀಠ, ರಾಣಾ ದಂಪತಿಯ ಅರ್ಜಿಯನ್ನು ವಜಾಗೊಳಿಸಿದೆ.
ಮುಂಬೈನಲ್ಲಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸದ ಹೊರಗೆ ಹನುಮಾನ್ ಚಾಲೀಸಾವನ್ನು ಪಠಿಸಲಾಗುವುದು ಎಂದು ಘೋಷಿಸಿದ ನಂತರ ಖಾರ್ ಪೊಲೀಸರು ದಂಪತಿಗಳ ವಿರುದ್ಧ ಎರಡು ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಈ ದಂಪತಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.