ದೇಶದಲ್ಲಿ ಮತ್ತೆ ಕೋವಿಡ್-19 ಹೆಚ್ಚಳ: ಒಂದೇ ದಿನದಲ್ಲಿ 30 ಸಾವು, 2,541 ಹೊಸ ಪ್ರಕರಣ ಪತ್ತೆ
ದೇಶದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,541 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 30 ಸಾವುಗಳು ಸಂಭವಿಸಿದೆ.
Published: 25th April 2022 10:38 AM | Last Updated: 25th April 2022 10:44 AM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,541 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, 30 ಸಾವುಗಳು ಸಂಭವಿಸಿದೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 5,22,223 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,522 ಇದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದೆ.
24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳು 649ಕ್ಕೆ ಹೆಚ್ಚಳವಾಗಿದ್ದು, ದೇಶದಲ್ಲಿ ಇಂದು 1,862 ಪ್ರಕರಣಗಳು ಚೇತರಿಕೆ ಆಗಿದ್ದು, ಒಟ್ಟು ಚೇತರಿಕೆಯ ಸಂಖ್ಯೆ 4,25,21,341ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳು ಒಟ್ಟು ಶೇ 0.04 ರಷ್ಟಿದ್ದರೆ, ರಾಷ್ಟ್ರೀಯ ಕೋವಿಡ್ -19 ಚೇತರಿಕೆ ದರವು ಶೇ 98.75 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಹೆಚ್ಚುವರಿಯಾಗಿ, ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಇದುವರೆಗೆ ದೇಶದಲ್ಲಿ ನಿರ್ವಹಿಸಲಾದ ಡೋಸ್ ಗಳು 187.71 ಕೋಟಿ ಮೀರಿದೆ. ಕಳೆದ 24 ಗಂಟೆಗಳಲ್ಲಿ 3,02,115 ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದೆ.
India reports 2,541 new COVID19 cases today; Active cases rise to 16,522
— ANI (@ANI) April 25, 2022
The daily positivity rate stands at 0.84% pic.twitter.com/xApkDrfKrK
ದೆಹಲಿಯೊಂದರಲ್ಲೇ ಭಾನುವಾರ 1,083 ಹೊಸ ಕೋವಿಡ್ -19 ಸೋಂಕುಗಳು ವರದಿಯಾಗಿದ್ದು, ಶೇ 4.48 ರ ಪಾಸಿಟಿವಿಟಿ ದರದೊಂದಿಗೆ, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಈಗ 18,74,876 ಮತ್ತು ಸಾವಿನ ಸಂಖ್ಯೆ 26,168 ಆಗಿದೆ.
ಸಿಎಸ್ ಎಸ್ ಇ ಪ್ರಕಾರ, ಅನುಕ್ರಮವಾಗಿ 80,984,914 ಮತ್ತು 991,254 ರಲ್ಲಿ ವಿಶ್ವದ ಅತಿ ಹೆಚ್ಚು ಪ್ರಕರಣಗಳು ಮತ್ತು ಸಾವುಗಳಲ್ಲಿ ಯುಎಸ್ ಹೆಚ್ಚು ಹಾನಿಗೊಳಗಾದ ದೇಶವಾಗಿದೆ. 43,057,545 ರಲ್ಲಿ ಭಾರತವು ಎರಡನೇ ಅತಿ ಹೆಚ್ಚು ಪ್ರಕರಣಗಳಿರುವ ದೇಶವಾಗಿದೆ.