ಫ್ರಾನ್ಸ್ ಅಧ್ಯಕ್ಷರ ಜೊತೆ ಒಟ್ಟಾಗಿ ಕೆಲಸ ಮಾಡಲು ಎದುರುನೋಡುತ್ತಿದ್ದೇನೆ: ಪಿಎಂ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಚುನಾವಣೆಯಲ್ಲಿ ಮರು ಆಯ್ಕೆಯಾಗಿರುವುದಕ್ಕೆ ಅಧಿನಂದಿಸಿದ್ದಾರೆ.
Published: 25th April 2022 10:49 AM | Last Updated: 25th April 2022 01:48 PM | A+A A-

ಭಾರತ-ಫ್ರಾನ್ಸ್ ಪ್ರಧಾನಿ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಚುನಾವಣೆಯಲ್ಲಿ ಮರು ಆಯ್ಕೆಯಾಗಿರುವುದಕ್ಕೆ ಅಧಿನಂದಿಸಿದ್ದಾರೆ.
ಭಾರತ-ಫ್ರಾನ್ಸ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಗಾಢಗೊಳಿಸಲು ಅವರೊಂದಿಗೆ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.
ಮ್ಯಾಕ್ರನ್ ಎರಡನೇ ಅವಧಿಗೆ ಫ್ರಾನ್ಸ್ ಪ್ರಧಾನಿಯಾಗಿ ಸುಲಭವಾಗಿ ಗೆಲುವು ಸಾಧಿಸಿದ್ದಾರೆ. 44 ವರ್ಷದ ಮ್ಯಾಕ್ರನ್ ಎರಡನೇ ಬಾರಿ 5 ವರ್ಷಗಳ ಅವಧಿಗೆ ಪ್ರಧಾನಿಯಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ನನ್ನ ಸ್ನೇಹಿತ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಅಭಿನಂದನೆಗಳು, ಭಾರತ-ಫ್ರಾನ್ಸ್ ಕಾರ್ಯತಂತ್ರ ಸಹಭಾಗಿತ್ವವನ್ನು ಗಾಢವಾಗಿಸಲು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Congratulations to my friend @EmmanuelMacron on being re-elected as the President of France! I look forward to continue working together to deepen the India-France Strategic Partnership.
— Narendra Modi (@narendramodi) April 25, 2022