ರಾಜ್ಯಪಾಲರ ಬದಲು ಸರ್ಕಾರದಿಂದಲೇ ವಿ.ವಿ.ಗಳಿಗೆ ಉಪ ಕುಲಪತಿಗಳ ನೇಮಕ: ತಮಿಳು ನಾಡು ವಿಧಾನಸಭೆ ಅಂಗೀಕಾರ
ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ಮಸೂದೆಯನ್ನು ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದ್ದು, ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿದಂತಾಗುತ್ತದೆ.
Published: 25th April 2022 01:39 PM | Last Updated: 25th April 2022 01:53 PM | A+A A-

ತಮಿಳು ನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್
ಚೆನ್ನೈ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ಮಸೂದೆಯನ್ನು ತಮಿಳುನಾಡು ವಿಧಾನಸಭೆ ಸೋಮವಾರ ಅಂಗೀಕರಿಸಿದ್ದು, ಈ ಮೂಲಕ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿದಂತಾಗುತ್ತದೆ.
ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಅವರು ತಮಿಳುನಾಡು ವಿಶ್ವವಿದ್ಯಾಲಯಗಳ ಕಾನೂನುಗಳಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಿದರು. ಮಸೂದೆಯಲ್ಲಿ ರಾಜ್ಯ ಸರ್ಕಾರವು ವಿಶ್ವವಿದ್ಯಾಲಯಗಳಿಗೆ ಉಪ ಕುಲಪತಿಗಳನ್ನು ನೇಮಕ ಮಾಡಲು ಅವಕಾಶ ಮಾಡಿಕೊಟ್ಟಿದೆ.
ಬಿಜೆಪಿ ಆರಂಭ ಹಂತದಲ್ಲಿ ಮಸೂದೆಯನ್ನು ವಿರೋಧಿಸಿತು, ಪ್ರಮುಖ ಪ್ರತಿಪಕ್ಷವಾದ ಎಐಎಡಿಎಂಕೆ, ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಕೆ ಸೆಲ್ವಪೆರುಂತಗೈ ಅವರು ದಿವಂಗತ ಜಯಲಲಿತಾ ಅವರ ಬಗ್ಗೆ ನೀಡಿರುವ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಸೂದೆ ಮಂಡನೆಗೆ ಮುನ್ನ ಸದನ ಬಿಟ್ಟು ಹೊರನಡೆದರು.
ಇದಕ್ಕೂ ಮುನ್ನ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಸರ್ಕಾರದ ನಿರ್ಧಾರವನ್ನು ಬೆಂಬಲಿಸುವಂತೆ ಸದನ ಸದಸ್ಯರಲ್ಲಿ ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್‌ನಲ್ಲಿಯೂ ಸಹ ಉಪಕುಲಪತಿಗಳನ್ನು ರಾಜ್ಯಪಾಲರು ನೇಮಿಸದೆ ರಾಜ್ಯ ಸರ್ಕಾರ ನೇಮಿಸುತ್ತಿದೆ ಎಂದರು.
ತೆಲಂಗಾಣ, ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿ ಹಿಂದೆ ಇತ್ತು. ಪ್ರತಿಪಕ್ಷ ಪಿಎಂಕೆ ಮಸೂದೆಯನ್ನು ಬೆಂಬಲಿಸಿದೆ.