ಕೇಜ್ರಿವಾಲ್ ನಿವಾಸ ಧ್ವಂಸ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಸೂರ್ಯಗೆ ದೆಹಲಿ ಪೊಲೀಸರ ಸೂಚನೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ...
Published: 26th April 2022 09:46 PM | Last Updated: 26th April 2022 09:46 PM | A+A A-

ತೇಜಸ್ವಿ ಸೂರ್ಯ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಪತ್ರದ ಮೂಲಕ ತನಿಖೆಗೆ ಹಾಜರಾಗುವಂತೆ ತೇಜಸ್ವಿ ಸೂರ್ಯ ಅವರಿಗೆ ಸೂಚಿಸಲಾಗಿದೆ. ಅವರು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದು, ತನಿಖೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ದೆಹಲಿಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನು ಓದಿ: ಕೇಜ್ರಿವಾಲ್ ಮನೆ ಧ್ವಂಸ ಪ್ರಕರಣ: ಎಫ್ಐಆರ್ ದಾಖಲಿಸಿದ ಪೊಲೀಸರು
ಘಟನೆಗೆ ಸಂಬಂಧಿಸಿದಂತೆ ಬಂಧಿತ ಎಂಟು ಮಂದಿ ಸೇರಿದಂತೆ ಒಟ್ಟು 26 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತಾಂತ್ರಿಕ ಮೂಲಗಳ ಮೂಲಕ ಅವರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಅರವಿಂದ್ ಕೇಜ್ರಿವಾಲ್ ಅವರು ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮಾರ್ಚ್ 30 ರಂದು ದೆಹಲಿ ಸಿಎಂ ಮನೆ ಮುಂದೆ ದಾಂದಲೆ ನಡೆಸಿದ್ದರು.