ಕಾಂಗ್ರೆಸ್ ಸೇರಲ್ಲ ಎಂದ 'ಹಳೆಯ ಸ್ನೇಹಿತ' ಪ್ರಶಾಂತ್ ಕಿಶೋರ್ ಭೇಟಿಯಾದ ಸಿಧು!
ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲ್ಲ ಎಂಬ ಹೇಳಿಕೆ ಬೆನ್ನಲ್ಲೇ, ಅವರನ್ನು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಭೇಟಿಯಾಗಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೂ ಕಾರಣವಾಗಿದೆ.
Published: 26th April 2022 07:52 PM | Last Updated: 26th April 2022 07:53 PM | A+A A-

ನವಜೋತ್ ಸಿಂಗ್ ಸಿಧು, ಪ್ರಶಾಂತ್ ಕಿಶೋರ್
ನವದೆಹಲಿ: ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರಲ್ಲ ಎಂಬ ಹೇಳಿಕೆ ಬೆನ್ನಲ್ಲೇ, ಅವರನ್ನು ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಭೇಟಿಯಾಗಿದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೂ ಕಾರಣವಾಗಿದೆ.
ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿರುವ ಫೋಟೋವೊಂದನ್ನು ಹಂಚಿಕೊಂಡಿರುವ ಸಿಧು, ಹಳೆಯ ಸ್ನೇಹಿತ ಎಂದು ಹೇಳಿದ್ದಾರೆ. ನನ್ನ ಹಳೆಯ ಸ್ನೇಹಿತ ಪ್ರಶಾಂತ್ ಕಿಶೋರ್ ಅವರೊಂದಿಗೆ ಅದ್ಬುತವಾದ ಸಭೆಯೊಂದನ್ನು ನಡೆಸಿದ್ದೇನೆ. ಹಳೆಯ ಚಿನ್ನ ಮತ್ತು ಹಳೆಯ ಸ್ನೇಹಿತರು ಈಗಲೂ ಉತ್ತಮ ಎಂದು ಸಿಧು, ಟ್ವೀಟರ್ ನಲ್ಲಿ ಕಿಶೋರ್ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ.
Had a wonderful meeting with my old friend PK … Old wine , Old gold and Old friends still the best !!! pic.twitter.com/OqOvkJqJmF
— Navjot Singh Sidhu (@sherryontopp) April 26, 2022
ಇದಕ್ಕೂ ಮುನ್ನ 2024ರ ಲೋಕಸಭಾ ಚುನಾವಣೆಗಾಗಿ ಐ-ಪ್ಯಾಕ್ ಭಾಗವಾಗಿ ಕಾಂಗ್ರೆಸ್ ಸೇರುವ ಅವಕಾಶವನ್ನು ನಿರಾಕರಿಸಿದ ಪ್ರಶಾಂತ್ ಕಿಶೋರ್, ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವದ ಅಗತ್ಯವಿದೆ. ಆಳವಾಗಿ ಬೇರೂರಿರುವ ರಚನಾತ್ಮಕ ಸಮಸ್ಯೆಗಳನ್ನು ಸುಧಾರಣೆಗಳೊಂದಿಗೆ ಸಾಮೂಹಿಕವಾಗಿ ಪರಿಹರಿಸಬೇಕಾಗಿದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಆ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದರು. ತನ್ನ ಯೋಜನೆ ಕುರಿತು ಸಮಗ್ರವಾಗಿ ಪಕ್ಷದ ಉನ್ನತ ನಾಯಕರಿಗೆ ವಿವರಿಸಿದ್ದರು ಎನ್ನಲಾಗಿದೆ.