ಮಧ್ಯ ಪ್ರದೇಶ ಸಿಎಲ್‌ಪಿ ನಾಯಕನ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ, ನೂತನ ನಾಯಕರಾಗಿ ಗೋವಿಂದ್ ಸಿಂಗ್ ನೇಮಕ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ(ಸಿಎಲ್‌ಪಿ)ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Published: 28th April 2022 08:13 PM | Last Updated: 28th April 2022 08:13 PM | A+A A-

ಕಮಲ್ ನಾಥ್
ಭೋಪಾಲ್: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ(ಸಿಎಲ್‌ಪಿ)ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನವೆಂಬರ್ 2023 ರಲ್ಲಿ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಮಲ್ ನಾಥ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಅಲ್ಲದೆ ಕಾಂಗ್ರೆಸ್ ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಷ್ಠಾವಂತ ಹಾಗೂ ಮಾಜಿ ಸಚಿವ ಡಾ.ಗೋವಿಂದ್ ಸಿಂಗ್ ಅವರನ್ನು ನೇಮಕ ಮಾಡಿದ್ದಾರೆ.
ಇದನ್ನು ಓದಿ: ಶೀಘ್ರವೇ ನನ್ನನ್ನು ಸಿಎಂ ಮಾಡಿ; ಇಲ್ಲದಿದ್ದರೆ ಪಂಜಾಬ್ ನಲ್ಲಾದಂತೆ ಆಗುತ್ತದೆ: ಸೋನಿಯಾಗೆ ಸಚಿನ್ ಪೈಲಟ್ ಮನವಿ
ಕಾಂಗ್ರೆಸ್ ನಲ್ಲಿ ಒಬ್ಬ ವ್ಯಕ್ತಿ, ಒಂದು ಹುದ್ದೆ ಎಂಬ ನಿಯಮದ ಅಡಿಯಲ್ಲಿ ಕಮಲ್ ನಾಥ್ ಅವರು ಸಿಎಲ್ ಪಿ ನಾಯಕನ ಸ್ಥಾನದಿಂದ ಕೆಳಗಿಳಿದಿದ್ದು, ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಕಮಲ್ ನಾಥ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿನ ನಂತರ 15 ತಿಂಗಳುಗಳ ಕಾಲ ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 2020 ರಲ್ಲಿ ಹಾಲಿ ಶಾಸಕರ ರಾಜೀನಾಮೆಯಿಂದ ಸರ್ಕಾರ ಪತನಗೊಂಡ ನಂತರವೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮುಂದುವರೆದಿದ್ದರು. ಈಗ ಆ ಹುದ್ದೆಗೂ ರಾಜೀನಾಮೆ ನೀಡಿದ್ದಾರೆ.