
ಸಂಗ್ರಹ ಚಿತ್ರ
ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.
ಹತ್ಯೆಯಾದ ಇಬ್ಬರು ಉಗ್ರರು ಈ ಹಿಂದೆ ವಲಸೆ ಕಾರ್ಮಿಕರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಪುಲ್ವಾಮಾದ ಮಿತ್ರಿಗಾಮ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಬುಧವಾರ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಇದರಂತೆ ನಿನ್ನೆ ಓರ್ವ ಉಗ್ರನನ್ನು ಹತ್ಯೆ ಮಾಡಿತ್ತು. ಸ್ಥಳದಲ್ಲಿ ಇನ್ನು ಕೆಲ ಉಗ್ರರು ಅಡಗಿ ಕುಳಿತಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆಸಿತ್ತು. ಇಂದು ಬೆಳಿಗ್ಗೆ ಮತ್ತೋರ್ವ ಉಗ್ರನನ್ನು ಹತ್ಯೆ ಮಾಡಿದೆ.
ಇದನ್ನೂ ಓದಿ: ಕಾಶ್ಮೀರ: ಪುಲ್ವಾಮಾ ಎನ್ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ
ಹತ್ಯೆಯಾದ ಉಗ್ರರನ್ನು ಅಲ್ ಬದರ್ ಉಗ್ರ ಸಂಘಟನೆಗೆ ಸೇರಿದ ಐಜಾಜ್ ಹಫೀಜ್ ಹಾಗೂ ಶಾಹೀದ್ ಆಯುಬ್ ಎಂದು ಗುರ್ತಿಸಲಾಗಿದೆ. ಇಬ್ಬರಿಂದಲೂ ಎರಡು ಎಕೆ 47 ರೈಫಲ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಹೇಳಿದ್ದಾರೆ.
ಕಾರ್ಯಾಚರಣೆ ನಡೆಸುತ್ತಿರುವ ಸ್ಥಳದಲ್ಲಿ ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರು ಸಿಕ್ಕಿಹಾಕಿಕೊಂಡಿದ್ದರು. ಸ್ಥಳೀಯರನ್ನು ಸ್ಥಳಾಂತರಿಸುವ ಅಗತ್ಯವಿದ್ದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಕೆಲ ಕಾಲ ಸ್ಥಗಿತಗೊಳಿಸಬೇಕಾಗಿ ಬಂದಿತ್ತು. ಇಂದು ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.