ಪಂಜಾಬ್: ನಿಲ್ದಾಣದಲ್ಲಿ ನಿಂತಿದ್ದ ಬಸ್'ಗಳಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಓರ್ವ ಸಜೀವ ದಹನ
ನಿಲ್ದಾಣದಲ್ಲಿ ನಿಂತಿದ್ದ ಬಸ್ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ನಡೆದಿದೆ.
Published: 29th April 2022 10:36 AM | Last Updated: 29th April 2022 11:27 AM | A+A A-

ಬಸ್'ಗೆ ಬೆಂಕಿ ಹೊತ್ತಿಕೊಂಡು ಉರಿಯುತ್ತಿರುವುದು.
ಬಠಿಂಡಾ: ನಿಲ್ದಾಣದಲ್ಲಿ ನಿಂತಿದ್ದ ಬಸ್ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ಭಗ್ತಾ ಭಾಯ್ ಕಾ ಬಸ್ ನಿಲ್ದಾಣದಲ್ಲಿ ಮೂರು ಬಸ್ಗಳು ಬೆಂಕಿಗೆ ಆಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತ ವ್ಯಕ್ತಿ ಬಸ್ ಕಂಡಕ್ಟರ್ ಆಗಿರಬಹುದು ಎಂದು ಹೇಳಲಾಗುತ್ತಿದೆ.
ಅಗ್ನಿ ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು, ಪರಿಶೀಲನೆ ಕೈಗೊಂಡಿದ್ದಾರೆ.