ಪಂಜಾಬ್ನಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರಲು ಯಾರಿಗೂ ಅವಕಾಶ ನೀಡುವುದಿಲ್ಲ: ಎಎಪಿ
ಪಂಜಾಬ್ನ ಪಟಿಯಾಲ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯನ್ನು ಆಮ್ ಆದ್ಮಿ ಪಕ್ಷ ಶುಕ್ರವಾರ ಖಂಡಿಸಿದೆ ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡಲು "ಯಾರಿಗೂ" ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.
Published: 29th April 2022 11:23 PM | Last Updated: 30th April 2022 01:18 PM | A+A A-

ಎಎಪಿ ಸಾಂದರ್ಭಿಕ ಚಿತ್ರ
ನವದೆಹಲಿ: ಪಂಜಾಬ್ನ ಪಟಿಯಾಲ ಜಿಲ್ಲೆಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆಯನ್ನು ಆಮ್ ಆದ್ಮಿ ಪಕ್ಷ ಶುಕ್ರವಾರ ಖಂಡಿಸಿದೆ ಮತ್ತು ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡಲು "ಯಾರಿಗೂ" ಅವಕಾಶ ನೀಡುವುದಿಲ್ಲ ಎಂದು ಹೇಳಿದೆ.
"ಎಲ್ಲ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು" ಎಂದು ಪಂಜಾಬ್ ಆಡಳಿತರೂಢ ಪಕ್ಷ ಒತ್ತಾಯಿಸಿದೆ.
ಪಂಜಾಬ್ನ ಪಟಿಯಾಲ ಜಿಲ್ಲೆಯಲ್ಲಿ "ಖಲಿಸ್ತಾನ್ ವಿರೋಧಿ ಮೆರವಣಿಗೆ" ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಇದನ್ನು ಓದಿ: ಪಟಿಯಾಲ ಘರ್ಷಣೆ: ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ, ಇಂಟರ್ನೆಟ್ ಸೇವೆ ಸ್ಥಗಿತ
ಘರ್ಷಣೆ ನಂತರ ಸ್ಥಳೀಯ ಅಧಿಕಾರಿಗಳು 11 ಗಂಟೆಗಳ ಕಾಲ ಕರ್ಫ್ಯೂ ಘೋಷಿಸಿದ್ದು, ಇಂದು ಸಂಜೆ 7 ರಿಂದ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.
"ಪಟಿಯಾಲದಲ್ಲಿ ಎರಡು ರಾಜಕೀಯ ಗುಂಪುಗಳ ನಡುವಿನ ಘರ್ಷಣೆಯನ್ನು ಬಲವಾಗಿ ಖಂಡಿಸುತ್ತೇವೆ. ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ಎಲ್ಲಾ ಕಿಡಿಗೇಡಿಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಿ ಶಿಕ್ಷಿಸಬೇಕು" ಎಎಪಿ ಚುನಾವಣಾ ತಂತ್ರಜ್ಞ ಮತ್ತು ಪಂಜಾಬ್ನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಸಹ-ಪ್ರಭಾರಿ, ಸಂದೀಪ್ ಪಾಠಕ್ ಅವರು ಟ್ವೀಟ್ ಮಾಡಿದ್ದಾರೆ.