ಉತ್ತರ ಪ್ರದೇಶ: ಮಸೀದಿಗಳಿಂದ 46 ಸಾವಿರ ಧ್ವನಿವರ್ಧಕಗಳ ತೆರವು!
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Published: 30th April 2022 08:36 PM | Last Updated: 30th April 2022 08:36 PM | A+A A-

ಮಸೀದಿಯೊಂದರ ಸಾಂದರ್ಭಿಕ ಚಿತ್ರ
ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಈ ಕಾರ್ಯಾಚರಣೆಯೊಂದಿಗೆ ಯಾವುದೇ ತಾರತಮ್ಯವಿಲ್ಲದೆ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ.
ಏಪ್ರಿಲ್ 25 ರಿಂದ ಆರಂಭವಾದ ಈ ಕಾರ್ಯಾಚರಣೆಯಡಿ ಒಟ್ಟು 45, 733 ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ. ಶನಿವಾರ ಬೆಳಗ್ಗೆಯವರೆಗೂ 58,861 ಧ್ವನಿವರ್ಧಕಗಳ ಡೆಸಿಬಲ್ ಮಿತಿಯನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 25 ರಿಂದ ಉತ್ತರ ಪ್ರದೇಶ ರಾಜ್ಯಾದ್ಯಂತ ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲಾಗುತ್ತಿದ್ದು, ಇದು ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಅವಸ್ತಿ ತಿಳಿಸಿದ್ದಾರೆ.