ವರದಕ್ಷಿಣೆ ತಾರದ ಪತ್ನಿ ಮೇಲೆ ಸಂಬಂಧಿಕರ ಜೊತೆ ಸೇರಿ ಗ್ಯಾಂಗ್ ರೇಪ್; ಯೂಟ್ಯೂಬ್ ಗೆ ವಿಡಿಯೋ ಅಪ್ಲೋಡ್ ಮಾಡಿದ ಪಾಪಿ ಪತಿ!
ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ.
Published: 30th April 2022 01:56 PM | Last Updated: 30th April 2022 02:07 PM | A+A A-

ಸಾಂದರ್ಭಿಕ ಚಿತ್ರ
ಭರತ್‌ಪುರ: ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಅದನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ.
ಸಂತ್ರಸ್ತೆಯು 1.5 ಲಕ್ಷ ರೂ. ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತು ಆತನ ಸಂಬಂಧಿಕರಿಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಮಹಿಳೆಯೊಬ್ಬರು ತನ್ನ ಪತಿ ಮತ್ತು ಇಬ್ಬರು ಸಂಬಂಧಿಕರ ಮೇಲೆ ಅತ್ಯಾಚಾರದ ಪ್ರಕರಣ ದಾಖಲಿಸಿದ್ದು, ಯೂಟ್ಯೂಬ್ ಗೆ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: 'ನನ್ನೊಂದಿಗೆ ಮಲಗದಿದ್ದರೆ ಇನ್ನೂ 20 ಸೈನಿಕರನ್ನು ಕರೆತರುತ್ತೇನೆ': 6 ತಿಂಗಳ ಗರ್ಭಿಣಿ ಮೇಲೆ ರಷ್ಯನ್ ಸೈನಿಕನ ಅತ್ಯಾಚಾರ
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಭರತ್‌ಪುರದ ಕಮಾನ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದೌಲತ್ ಸಾಹು ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದ ವಿಡಿಯೋ ಕುರಿತಂತೆ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಸಂತ್ರಸ್ತೆ ನೀಡಿರುವ ದೂರಿನಲ್ಲಿ, “2019ರಲ್ಲಿ ನನ್ನ ಮದುವೆಯಾಗಿತ್ತು. ನನ್ನ ಅತ್ತೆಯಂದಿರು ವರದಕ್ಷಿಣೆಗಾಗಿ ನನಗೆ ಕಿರುಕುಳ ನೀಡುತ್ತಿದ್ದರು. ನನ್ನ ಪೋಷಕರು ವರದಕ್ಷಿಣೆ ಬದಲಿಗೆ ನಮ್ಮ ಸ್ವಂತ ಮನೆಯನ್ನೇ ನೀಡುತ್ತೇವೆ ಎಂದು ಹೇಳಿದ್ದರು. ಆದರೂ ಅದಕ್ಕೆ ತೃಪ್ತಿಯಾಗದೇ ನನ್ನ ಪತಿಯ ಸಂಬಂಧಿಕರು ಹಣಕ್ಕಾಗಿ ಪೀಡಿಸುತ್ತಿದ್ದರು. ಬಳಿಕ ನನ್ನ ಪತಿಯನ್ನು ನನ್ನ ಪೋಷಕರು ಸಂತೈಸಿ ಅವರೊಂದಿಗೆ ನನ್ನನ್ನು ಕಳುಹಿಸಿಕೊಟ್ಟರು.
ಇದನ್ನೂ ಓದಿ: ಉತ್ತರ ಪ್ರದೇಶ: ಹಸುವಿನ ಮೇಲಿನ ಅತ್ಯಾಚಾರದ ದೃಶ್ಯ ಸಿಸಿಟಿವಿಯಲ್ಲಿ ಸೆರೆ; ಕಾಮುಕನ ಬಂಧನ!
ಬಳಿಕ ಒಂದು ದಿನ ನನ್ನ ಪತಿ ತನ್ನ ಸ್ನೇಹಿತ ಮತ್ತು ಸಂಬಂಧಿಕರನ್ನು ಮನೆಗೆ ಕರೆದುಕೊಂಡು ಬಂದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡುವಂತೆ ಹೇಳಿದರು. ಅಲ್ಲದೆ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ಯೂಟ್ಯೂಬ್ ಗೆ ಅಪ್ಲೋಡ್ ಮಾಡುವಂತೆ ಹೇಳಿದರು. ಅದರಂತೆ ಪತಿಯ ಸ್ನೇಹಿತ ಮತ್ತು ಸಂಬಂಧಿಕ ವ್ಯಕ್ತಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಘಟನೆಯನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದರು. ನಂತರ ಆ ವೀಡಿಯೊಗಳನ್ನು ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ.
“ನಿಮ್ಮ ಕುಟುಂಬದ ಸದಸ್ಯರು ನನಗೆ ವರದಕ್ಷಿಣೆ ನೀಡಲು ಸಾಧ್ಯವಿಲ್ಲ, ಆದರೆ ಈಗ ನಾನು ಈ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಹಾಕುವ ಮೂಲಕ ಅದೇ ಮೊತ್ತವನ್ನು ಗಳಿಸುತ್ತೇನೆ” ಎಂದು ಹೇಳಿಕೆ ನೀಡಿ ಅಶ್ಲೀಲ ವೀಡಿಯೊವನ್ನು ಯೂಟ್ಯೂಬ್‌ಗೆ ಅಪ್‌ಲೋಡ್ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಇದನ್ನೂ ಓದಿ: ಮುಸ್ಲಿಮ್ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಸನ್ಯಾಸಿಗೆ ಜಾಮೀನು; ವಿಷಾದವಿಲ್ಲ ಎಂದ ಸ್ವಾಮೀಜಿ
ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ವಿಡಿಯೋವನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂಬ ಆರೋಪಗಳಿಗೆ ಇನ್ನೂ ಸಾಕ್ಷಿ ಅಥವಾ ವಿಡಿಯೋ ಪತ್ತೆಯಾಗಿಲ್ಲ. ಈ ಬಗ್ಗೆ ತನಿಖೆ ಮುಂದುವರೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2020 ರಲ್ಲಿ, ರಾಜಸ್ಥಾನವು ದೇಶದಲ್ಲಿ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದೆ. ರಾಜಸ್ಥಾನದಲ್ಲಿ 5,310 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ರಾಜಸ್ಥಾನದ ನಂತರ ಉತ್ತರ ಪ್ರದೇಶವು 2,769 ಅತ್ಯಾಚಾರ ಘಟನೆಗಳನ್ನು ಕಂಡಿದೆ.
ಇದನ್ನೂ ಓದಿ: ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಏಳು ಮಂದಿ ಬಂಧನ
ಒಟ್ಟು 2,339 ಪ್ರಕರಣಗಳೊಂದಿಗೆ ಮಧ್ಯಪ್ರದೇಶ ಮೂರನೇ ಸ್ಥಾನದಲ್ಲಿದೆ. ಪ್ರಮುಖವಾಗಿ ಅಪ್ರಾಪ್ತ ಬಾಲಕಿಯರ ಮೇಲೆ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ರಾಜಸ್ಥಾನದಲ್ಲಿ ದಾಖಲಾಗಿವೆ. ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ 1,279 ಅತ್ಯಾಚಾರ ಪ್ರಕರಣಗಳು ನಡೆದಿವೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ರಾಜಸ್ಥಾನ ಮೂರನೇ ಸ್ಥಾನದಲ್ಲಿದೆ. ರಾಜಸ್ಥಾನದಲ್ಲಿ ಇಂತಹ ಘಟನೆಗಳ 34535 ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.