ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ: 8 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ!
ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು.
Published: 01st August 2022 05:26 PM | Last Updated: 01st August 2022 05:26 PM | A+A A-

ಬೆಂಕಿ ಅವಘಡ
ಭೋಪಾಲ್: ಮಧ್ಯಪ್ರದೇಶದ ಜಬಲ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಜಬಲ್ ಪುರದ ದಾಮೋಹ್ ನಾಕಾ ಪ್ರದೇಶದ ಸಮೀಪವಿರುವ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತು.
ಬೆಂಕಿಯಲ್ಲಿ ಐವರು ರೋಗಿಗಳು ಮತ್ತು ಮೂವರು ಆಸ್ಪತ್ರೆ ಸಿಬ್ಬಂದಿ ಸಜೀವವಾಗಿ ಸುಟ್ಟುಹೋಗಿದ್ದಾರೆ. ಡಜನ್ ಗೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದು ಭಾರೀ ಬೆಂಕಿ ಅವಘಡ. ನಮ್ಮ ತಂಡಗಳು ಆಸ್ಪತ್ರೆಯಲ್ಲಿ ಸಿಲುಕಿರುವ ಎಲ್ಲ ಜನರನ್ನು ರಕ್ಷಿಸಿವೆ. ಬೆಂಕಿ ನಂದಿಸಲಾಗಿದೆ ಎಂದು ಜಬಲ್ ಪುರದ ಮುಖ್ಯ ಪೊಲೀಸ್ ಅಧೀಕ್ಷಕ ಅಖಿಲೇಶ್ ಗೌರ್ ಹೇಳಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.