ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ 16,464 ಹೊಸ ಪ್ರಕರಣಗಳು, 24 ಜನರು ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 16,464 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,40,36,275ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 16,464 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,40,36,275ಕ್ಕೆ ಏರಿಕೆಯಾಗಿದೆ. ಸದ್ಯ 1,43,989 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, 24 ಗಂಟೆಗಳ ಅವಧಿಯಲ್ಲಿ 24 ಜನರು ಸೋಂಕಿನಿಂದಾಗಿ ಸಾವಿಗೀಡಾಗಿದ್ದು, ಒಟ್ಟು 5,26,396 ಜನರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.33ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.48ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 6.01ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.80ರಷ್ಟಿದೆ. ಈವರೆಗೆ 4,33,65,890 ಜನರು ಗುಣಮುಖರಾಗಿದ್ದಾರೆ. ಮರಣ ಪ್ರಮಾಣ ಶೇ 1.20ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ದೇಶದಾದ್ಯಂತ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 204.34 ಕೋಟಿ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com