ಕೇರಳದಲ್ಲಿ ಭಾರೀ ಮಳೆ, ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆ

ಕೇರಳದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಿಸಿದೆ.
ಕೇರಳದಲ್ಲಿ ಮಳೆಯಿಂದ ಜಲಾವೃತಗೊಂಡಿರುವ ರಸ್ತೆಗಳು
ಕೇರಳದಲ್ಲಿ ಮಳೆಯಿಂದ ಜಲಾವೃತಗೊಂಡಿರುವ ರಸ್ತೆಗಳು

ತಿರುವನಂತಪುರಂ: ಕೇರಳದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಿಸಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಾಪ್ಪುಝಾ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿದೆ. 

ಮಳೆಯಿಂದಾದ ಹಾನಿಯನ್ನು ನಿರ್ಣಯಿಸಿ, ಪರಿಹಾರ ಕಾರ್ಯ ಕೈಗೊಳ್ಳಲು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಜಿಲ್ಲಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಳೆ ಹಿನ್ನೆಲೆಯಲ್ಲಿ ಜನರು ನದಿಗಳತ್ತ ತೆರಳದಂತೆ, ಕೆರೆ, ಹೊಳೆ ಹತ್ತಿರ ಸ್ನಾನಕ್ಕೆ, ಬಟ್ಟೆ ತೊಳೆಯಲು ಹೋಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ರೆಡ್ ಆಲರ್ಟ್ ಅಲ್ಲದೇ, ತ್ರಿಶೂರ್, ಮಲ್ಲಪುರಂ ಜಿಲ್ಲೆಯಲ್ಲಿ ಆರೆಂಜ್ ಆಲರ್ಟ್, ಉಳಿದ ಕಡೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com