ಭೂ ಹಗರಣ: ತೀವ್ರ ವಿಚಾರಣೆ, ದಾಳಿ ಬಳಿಕ ಶಿವಸೇನೆ ಸಂಸದ ಸಂಜಯ್ ರಾವತ್ ಬಂಧನ
ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಸಂಸದ ಸಂಜಯ್ ರಾವುತ್ ಅವರನ್ನು ಆರು ಗಂಟೆಗಳ ವಿಚಾರಣೆ ಬಳಿಕ ಮಧ್ಯರಾತ್ರಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
Published: 01st August 2022 01:41 AM | Last Updated: 01st August 2022 01:41 AM | A+A A-

ಸಂಜಯ್ ರಾವತ್
ನವದೆಹಲಿ: ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಸಂಸದ ಸಂಜಯ್ ರಾವುತ್ ಅವರನ್ನು ಆರು ಗಂಟೆಗಳ ವಿಚಾರಣೆ ಬಳಿಕ ಮಧ್ಯರಾತ್ರಿ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
"ತೀವ್ರ ವಿಚಾರಣೆ ಮತ್ತು ದಾಳಿಯ ನಂತರ ಸಂಜಯ್ ರಾವತ್ ಅವರನ್ನು ಬಂಧಿಸಲಾಗಿದೆ. ರಾವತ್ ಅವರಿಗೆ ಹೆದರಿ ಬಿಜೆಪಿ ಬಂಧಿಸಿದೆ. ಆದರೆ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಮಗೆ ಯಾವುದೇ ದಾಖಲೆಗಳನ್ನು ನೀಡಿಲ್ಲ. ಅವರನ್ನು ಬೆಳಿಗ್ಗೆ 11.30 ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು" ಎಂದು ರಾವತ್ ಸಹೋದರ ಸುನಿಲ್ ರಾವತ್ ಅವರು ಹೇಳಿರುವುದಾಗಿ ಎಂದು ಎಎನ್‌ಐ ವರದಿ ಮಾಡಿದೆ.
ಇದನ್ನು ಓದಿ: ಇಡಿ ರಾವುತ್ ರನ್ನು ಬಂಧಿಸಬಹುದು, ಪಕ್ಷ ಮುಗಿಸಲು 'ಪಿತೂರಿ': ಉದ್ಧವ್ ಠಾಕ್ರೆ
ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ವಶಕ್ಕೆ ಪಡೆದಿತ್ತು.
ರಾವತ್ ನಿವಾಸದ ಮೇಲೆ ದಾಳಿ ನಡೆಸಿದ ಗಂಟೆಗಳ ನಂತರ ಇಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. 1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಈ ಹಿಂದೆ ಎರಡು ಬಾರಿ ವಿಚಾರಣೆ ನಡೆಸಲಾಗಿದೆ.
ಬೆಳಗ್ಗೆ 7 ಗಂಟೆಗೆ, ತನಿಖಾ ಸಂಸ್ಥೆ ತಂಡವು ಸಿಐಎಸ್ಎಫ್ ಅಧಿಕಾರಿಗಳೊಂದಿಗೆ ಮುಂಬೈನ ಪೂರ್ವ ಉಪನಗರದಲ್ಲಿರುವ ಬಂಡಪ್‌ನಲ್ಲಿರುವ ಸಂಜಯ್ ರಾವತ್ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿತು. ಜಾರಿ ನಿರ್ದೇಶನಾಲಯ ಮುಂಬೈನಲ್ಲಿ ಪಾತ್ರಾ ಚಾಲ್‌ನ ಮರು-ಅಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾವತ್ ಅವರನ್ನ ಹಾಗೂ ಅವರ ಪತ್ನಿ ಮತ್ತು ಸಂಬಂಧಿಕರ ವಹಿವಾಟುಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದೆ. ಉದ್ಧವ್ ಠಾಕ್ರೆ ಶಿಬಿರದ ಸಂಜಯ್ ರಾವತ್ ಅವರು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದು ರಾಜಕೀಯ ದ್ವೇಷದಿಂದ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ನಾನು ಸತ್ತರೂ ಶರಣಾಗುವುದಿಲ್ಲ. ನನಗೂ ಯಾವುದೇ ಹಗರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದ ಸಂಜಯ್ ರಾವತ್ ಕೊನೆಗೂ ಇಡಿ ವಶವಾಗಿದ್ದಾರೆ.
ಜುಲೈ 1 ರಂದು ಸಂಜಯ್ ರಾವತ್ ರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಗೋರೆಗಾಂವ್ ಪ್ರದೇಶದಲ್ಲಿನ ಪತ್ರಾ ಚಾಲ್‌ನ ಮರು ಅಭಿವೃದ್ಧಿಗೆ ಸಂಬಂಧಿಸಿದ 1,034 ಕೋಟಿ ರೂ. ಭೂ ಹಗರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಪ್ರವೀಣ್ ರಾವತ್ ಅವರನ್ನು ಬಂಧಿಸಲಾಗಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.