ಸಚಿವೆ ಸ್ಮೃತಿ ಇರಾನಿ ಮಗಳು ಬಾರ್ ನಡೆಸುತ್ತಿರುವ ಆರೋಪ: ಕೋರ್ಟ್ ನಲ್ಲಿ ಕಾಂಗ್ರೆಸ್ಸಿಗರಿಗೆ ಮತ್ತೆ ಮುಖಭಂಗ!

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಮಗಳು ಗೋವಾದ ರೆಸ್ಟೋರೆಂಟ್ ಮತ್ತು ಬಾರ್‌ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಈ ಮೂಲಕ ಅವರ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ.
ಸ್ಮೃತಿ ಇರಾನಿ
ಸ್ಮೃತಿ ಇರಾನಿ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಅವರ ಮಗಳು ಗೋವಾದ ರೆಸ್ಟೋರೆಂಟ್ ಮತ್ತು ಬಾರ್‌ನ ಮಾಲೀಕರಲ್ಲ ಎಂದು ದೆಹಲಿ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಈ ಮೂಲಕ ಅವರ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ.

ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಪವನ್ ಖೇರಾ, ನೆಟ್ಟಾ ಡಿಸೋಜಾ ಮತ್ತು ಇತರರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಅವರ ಪುತ್ರಿಯ ಮೇಲೆ ಸುಳ್ಳು ಮತ್ತು ವೈಯಕ್ತಿಕ ದಾಳಿಯನ್ನು ಪ್ರಾರಂಭಿಸಲು ಪಿತೂರಿ ನಡೆಸಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ದಾಖಲೆಗಳನ್ನು ಪರಿಗಣಿಸಿದರೆ ಫಿರ್ಯಾದುದಾರರು ಅಥವಾ ಅವರ ಮಗಳ ಪರವಾಗಿ ಯಾವುದೇ ಪರವಾನಗಿ ನೀಡಲಾಗಿಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ. ಫಿರ್ಯಾದುದಾದರು ಅಥವಾ ಅವರ ಮಗಳು ರೆಸ್ಟೋರೆಂಟ್‌ನ ಮಾಲೀಕರಲ್ಲ. ಅವರು ಎಂದಿಗೂ ಲೈಸೆನ್ಸ್ ಗಾಗಿ ಎಂದಿಗೂ ಅರ್ಜಿ ಸಲ್ಲಿಸಲಿಲ್ಲ ಎಂದು ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ದಾಖಲಿಸಿರುವ 2 ಕೋಟಿ ಸಿವಿಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಹೇಳಿದೆ.

ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂಬ ಆರೋಪದ ಮೂಲಕ ಕಾಂಗ್ರೆಸ್ಸಿಗರು ಕೆಂಗಣ್ಣಿಗೆ ಗುರಿಯಾಗಿದ್ದರು.

ಕಾಂಗ್ರೆಸ್ ನಾಯಕರು ತಮ್ಮ ಆರೋಪಗಳ ಟ್ವೀಟ್‌ಗಳನ್ನು ತೆಗೆದುಹಾಕಬೇಕು. ಒಂದು ವೇಳೆ ಅವರು ವಿಫಲವಾದರೆ, ಟ್ವಿಟರ್ ಅದನ್ನು ಮಾಡಬೇಕಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com