ಕೇರಳದಲ್ಲಿ ರೆಡ್ ಅಲರ್ಟ್ ಹಿಂಪಡೆದ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ ಘೋಷಣೆ

ಆಗಸ್ಟ್ 4 ರವರೆಗೂ ಘೋಷಿಸಲಾಗಿದ್ದ ರೆಡ್ ಅಲರ್ಟ್ ಅನ್ನು ಕೇರಳದಿಂದ ಹಿಂತೆಗೆದುಕೊಳ್ಳಲಾಗಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ/ಪತ್ತನಂತಿಟ್ಟ: ಆಗಸ್ಟ್ 4 ರವರೆಗೂ ಘೋಷಿಸಲಾಗಿದ್ದ ರೆಡ್ ಅಲರ್ಟ್ ಅನ್ನು ಕೇರಳದಿಂದ ಹಿಂತೆಗೆದುಕೊಳ್ಳಲಾಗಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಧ್ಯಾಹ್ನ 12 ಗಂಟೆಗೆ ಹವಾಮಾನ ಇಲಾಖೆಯು ರಾಜ್ಯದಿಂದ ರೆಡ್ ಅಲರ್ಟ್ ಅನ್ನು ಹಿಂತೆಗೆದುಕೊಂಡಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದ ತಿರುವನಂತಪುರಂ, ಕೊಲ್ಲಂ ಮತ್ತು ಕಾಸರಗೋಡು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆಯಾದರೆ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚಿನ ಭಾರಿ ಮಳೆಯಾಗುವ ಸಾಧ್ಯತೆ ಇರುತ್ತದೆ. ಆರೆಂಜ್ ಅಲರ್ಟ್ ಎಂದರೆ 6 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ. ಯೆಲ್ಲೋ ಅಲರ್ಟ್ ಎಂದರೆ 6 ರಿಂದ 11 ಸೆಂ.ಮೀ ನಡುವೆ ಮಳೆಯಾಗುವ ಸಾಧ್ಯತೆಯಿರುತ್ತದೆ.

ಈ ಮಧ್ಯೆ, ರಾಜ್ಯ ಸರ್ಕಾರ ನೀಡಿರುವ ಪ್ರಕಟಣೆ ಪ್ರಕಾರ, ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ, ವಿವಿಧ ಜಿಲ್ಲೆಗಳಲ್ಲಿ 166 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ವಿಪತ್ತು ಪೀಡಿತ ಪ್ರದೇಶಗಳಿಂದ ಈವರೆಗೆ 4,639 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.

ರಾಜ್ಯದ ಆರು ಅಣೆಕಟ್ಟುಗಳಾದ ಪೊನ್ಮುಡಿ, ಲೋವರ್ ಪೆರಿಯಾರ್, ಕಲ್ಲರ್ಕುಟ್ಟಿ, ಇಡುಕ್ಕಿಯಲ್ಲಿರುವ ಎರಟ್ಟಯಾರ್ ಮತ್ತು ಕುಂಡಾಲ ಹಾಗೂ ಪತ್ತನಂತಿಟ್ಟ ಜಿಲ್ಲೆಯ ಮೂಝಿಯಾರ್‌ನಲ್ಲಿ ನೀರು ಅಪಾಯದ ಶೇಖರಣಾ ಮಟ್ಟವನ್ನು ತಲುಪಿದೆ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com