ವೈಜಾಗ್: ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ, 100 ಮಹಿಳಾ ಕಾರ್ಮಿಕರು ಅಸ್ವಸ್ಥ
ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್‍ನಲ್ಲಿ ನಡೆದಿದೆ.
Published: 03rd August 2022 11:59 AM | Last Updated: 03rd August 2022 11:59 AM | A+A A-

ಕಾರ್ಖಾನೆ ಸಿಬ್ಬಂದಿ ಜೊತೆ ಅಧಿಕಾರಿಗಳ ಚರ್ಚೆ
ಆಂಧ್ರಪ್ರದೇಶ : ಉಡುಪು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ 100ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಬ್ರಾಂಡಿಕ್ಸ್‍ನಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ವಿಶೇಷ ಆರ್ಥಿಕ ವಲಯ (ಎಸ್‌ಇಝೆಡ್)ದಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆ ಉಂಟಾಗಿ 100ಕ್ಕೂ ಅಧಿಕ ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಬ್ರಾಂಡಿಕ್ಸ್ ಎಸ್‌ಇಝೆಡ್‌ನಲ್ಲಿ ಉಡುಪು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಗ್ಯಾಸ್ ಸೋರಿಕೆಯಾದ ಬೆನ್ನಲ್ಲೇ ಕಾರ್ಮಿಕರು ಅಸ್ವಸ್ಥರಾಗಿದ್ದು ಕೂಡಲೇ ಸ್ಥಳೀಯ ಅರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು.
ಘಟನೆ ಕುರಿತು ಮಾಹಿತಿ ನೀಡಿದ ಅಣಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೈಗಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಾಗಿ ಸುಮಾರು 50ಕ್ಕೂ ಅಧಿಕ ಮಹಿಳೆಯರು ಅಸ್ವಸ್ಥರಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲದೆ ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ ಎಂದು ಹೇಳಿದ್ದಾರೆ. ಅನಿಲ ಸೋರಿಕೆಗೆ ತಕ್ಷಣದ ಕಾರಣವೇನು ಎನ್ನುವುದು ತಿಳಿದುಬಂದಿಲ್ಲ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 3 ರಂದು ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು, 200 ಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಪ್ರಜ್ಞಾಹೀನರಾಗಿದ್ದರು. ಈ ಪ್ರದೇಶದಲ್ಲಿನ ಪೋರಸ್ ಲ್ಯಾಬೋರೇಟರೀಸ್ ಘಟಕದಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆಯ ನಂತರ, ಸರ್ಕಾರವು ಒಂದು ವಾರದವರೆಗೆ ಸುತ್ತಮುತ್ತಲಿನ ಪೋರಸ್ ಲ್ಯಾಬ್ ಅನ್ನು ಮುಚ್ಚಿತು. ಘಟನೆಯ ಬಗ್ಗೆ ತನಿಖೆ ನಡೆಸಲು ಸರ್ಕಾರವು ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಜಂಟಿ ಸಮಿತಿಯನ್ನು ರಚಿಸಿತು.