ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ಬಿಜೆಪಿ ನಾಯಕ ಮನೋಜ್ ತಿವಾರಿಗೆ ದಂಡ, ಕ್ಷಮೆಯಾಚನೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ‍್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.
Published: 04th August 2022 01:38 PM | Last Updated: 04th August 2022 01:38 PM | A+A A-

ಹೆಲ್ಮೆಟ್ ಧರಿಸದೆ ಬೈಕ್ ಚಾಲನೆಯಲ್ಲಿ ಕಂಡುಬಂದ ಮನೋಜ್ ತಿವಾರಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಮೋಟಾರ್ ಸೈಕಲ್ ರ‍್ಯಾಲಿಯಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮನೋಜ್ ತಿವಾರಿ ಅವರಿಗೆ ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿದ್ದಾರೆ.
ತಿವಾರಿ ಅವರು ಬುಧವಾರ 'ಹರ್ ಘರ್ ತಿರಂಗಾ' ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಲು ಕೆಂಪು ಕೋಟೆ ಬಳಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದಾಗ ಚಲನ್ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಮೋಟಾರ್ ಸೈಕಲ್ ಸವಾರಿ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ದ್ವಿಚಕ್ರ ವಾಹನ ಸವಾರಿ ಮಾಡುವಾಗ ಸುರಕ್ಷತಾ ನಿಯಮಗಳನ್ನು ನಿರ್ಲಕ್ಷಿಸಬೇಡಿ ಎಂದೂ ಒತ್ತಾಯಿಸಿದ್ದಾರೆ.
Very Sorry for not wearing helmet today. I will pay the challan @dtptraffic