ದೇಶದಲ್ಲಿ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಿಕೆ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯಾ

ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಇಲ್ಲಿಯವರೆಗೂ 10 ಕೋಟಿ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಶುಕ್ರವಾರ ಹೇಳಿದ್ದಾರೆ. 18 ವರ್ಷ ಕ್ಕೂ ಮೇಲ್ಪಟ್ಟವರಿಗೆ ಸಾರ್ವಜನಿಕ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್  ನೀಡುವ 75 ದಿನಗಳ ವಿಶೇಷ ಅಭಿಯಾನವನ್ನು ಸರ್ಕಾರ ಜುಲೈ 15 ರಂದು ಪ್ರಾರಂಭಿಸಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಮಾಂಡವೀಯಾ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಡಿ, ಅಮೃತ ಮಹೋತ್ಸವ ಕೋವಿಡ್ ಲಸಿಕೆ ನೀಡಿಕೆ ಕಾರ್ಯಕ್ರಮ ವೇಗವಾಗಿ ನಡೆಯುತ್ತಿದ್ದು, ಎಲ್ಲಾ ವಯಸ್ಕರಿಗೆ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.  

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ 75 ದಿನಗಳ ವಿಶೇಷ ಕೋವಿಡ್ ಲಸಿಕಾ ಅಭಿಯಾನವನ್ನು ಆರಂಭಿಸಿದ್ದು, ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ನೀಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com