ನ್ಯಾಷನಲ್ ಹೆರಾಲ್ಡ್ ತನಿಖೆ: 8 ಗಂಟೆ ಇಡಿಯಿಂದ ಮಲ್ಲಿಕಾರ್ಜುನ ಖರ್ಗೆ ವಿಚಾರಣೆ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸುಮಾರು 8 ಗಂಟೆ ವಿಚಾರಣೆ ನಡೆಸಲಾಯಿತು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ತನಿಖೆಯ ಭಾಗವಾಗಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸುಮಾರು 8 ಗಂಟೆ ವಿಚಾರಣೆ ನಡೆಸಲಾಯಿತು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಿಳಿಸಿದ್ದಾರೆ.
 
ಗುರುವಾರ ಮಧ್ಯಾಹ್ನ 12:40 ರ ಸುಮಾರಿಗೆ ಐಟಿಒ ಬಳಿಯ  ಹೆರಾಲ್ಡ್ ಹೌಸ್ ಕಟ್ಟಡ ತಲುಪಿದ 80 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಇಡಿ ಅಧಿಕಾರಿ ಭೇಟಿಯಾಗಿ ವಿಚಾರಣೆ ಎದುರಿಸಿದರು. ನಂತರ  ರಾತ್ರಿ 8:30ರ ಸುಮಾರಿಗೆ ಖರ್ಗೆ ಅವರು ತಮ್ಮ ವೈಯಕ್ತಿಕ ಸಿಬ್ಬಂದಿಯೊಂದಿಗೆ ಕಟ್ಟಡದಿಂದ ನಿರ್ಗಮಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,  ಇದು ತನಿಖೆಯಾಗಿರುವುದರಿಂದ ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದರು. ಇಡಿ ಖರ್ಗೆ ಅವರ ವಿಚಾರಣೆ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ ನಲ್ಲಿಯೂ ಮಲ್ಲಿಕಾರ್ಜುನ ಖರ್ಗೆ ಇಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೊಳಗಾಗಿದ್ದರು. 

ಖರ್ಗೆ ಅವರ ವಿರುದ್ಧದ ಕ್ರಮವು ಕಿರುಕುಳವಲ್ಲದೆ ಬೇರೇನೂ ಅಲ್ಲ,  ಇದು ಮೋದಿ ಸರ್ಕಾರದಿಂದ ರಾಜಕೀಯ ಸೇಡಿನ ಪರಮಾವಧಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಕ್ಷದ ವಕ್ತಾರ ಜೈರಾಮ್ ರಮೇಶ್  ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com