ಸಂಸತ್ ಎದುರು ಪ್ರತಿಭಟನೆ ನಡೆಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ವಶಕ್ಕೆ 

ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗಗಳ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು

ನವದೆಹಲಿ: ಬೆಲೆ ಏರಿಕೆ, ಹಣದುಬ್ಬರ ಹಾಗೂ ನಿರುದ್ಯೋಗಗಳ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಕಪ್ಪುಬಟ್ಟೆ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಂಸತ್ ಭವನದ ಎದುರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಉತ್ತರಾಖಂಡ್ ಮಾಜಿ ಸಿಎಂ ಹರೀಶ್ ರಾವತ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದಿದ್ದಾರೆ.

ಇದಕ್ಕೂ ಮುನ್ನ ಪ್ರತಿಭಟನಾ ನಿರತ ಸಂಸದರನ್ನು ವಿಜಯ್ ಚೌಕ್ ಬಳಿ ಪೊಲೀಸರು ತಡೆದಿದ್ದರು.
 
ನವದೆಹಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂಬ ಕಾರಣ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ನ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರು. ಪೊಲೀಸ್ ಅನುಮತಿ ನಿರಾಕರಣೆಯ ಹೊರತಾಗಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com