ಜಮ್ಮು-ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, ವಲಸೆ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ  ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಿತ್ರ
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಿತ್ರ

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ  ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಬಿಹಾರದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮಾದ ಗಡೂರ ಗ್ರಾಮದ ಕಾರ್ಮಿಕರ ಟೆಂಟ್‌ನ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದಿದ್ದಾರೆ. ಗ್ರೆನೇಡ್ ಸ್ಫೋಟದಿಂದ ಕಾರ್ಮಿಕರೊಬ್ಬರು ಮೃತಪಟ್ಟಿದ್ದು,  ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರೊಬ್ಬರು ಹೇಳಿದ್ದಾರೆ. 

ಮೃತಪಟ್ಟ ಕಾರ್ಮಿಕನನ್ನು ಬಿಹಾರದ ಸಕ್ವಾ ಪರ್ಸಾ ನಿವಾಸಿ ಮೊಹಮ್ಮದ್ ಮುಮ್ತಾಜ್ ಎಂದು ಗುರುತಿಸಲಾಗಿದೆ.  ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ. ಕಾರ್ಮಿಕರು ಹತ್ತಿ ಹಾಸಿಗೆಗಳನ್ನು ತಯಾರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಉಗ್ರಗಾಮಿಗಳು ಸ್ಥಳೀಯರಲ್ಲದವರ ಮೇಲೆ ದಾಳಿಯನ್ನು ಹೆಚ್ಚಿಸಿದ್ದರು ಆದರೆ ಕಳೆದ ಎರಡು ತಿಂಗಳಿನಿಂದ ಇಂತಹ ಉದ್ದೇಶಿತ ಹತ್ಯೆಗಳು ಸ್ಥಗಿತಗೊಂಡಿದ್ದವು ಎಂದು ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com