ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ, ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ವಿವಿಧ ವಿಚಾರಗಳ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತುಘಲಕ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ವಿವಿಧ ವಿಚಾರಗಳ ವಿರುದ್ಧ ಕಾಂಗ್ರೆಸ್ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ತುಘಲಕ್ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಹಣದುಬ್ಬರ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಹೆಚ್ಚಳದ ವಿರುದ್ಧ ಶುಕ್ರವಾರ ದೇಶವ್ಯಾಪಿ ಪ್ರತಿಭಟನೆಗೆ ವಿರೋಧ ಪಕ್ಷ ಕಾಂಗ್ರೆಸ್ ಕರೆ ನೀಡಿತ್ತು.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 186 (ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶಕ್ಕೆ ಅವಿಧೇಯತೆ), 332 (ಸ್ವಯಂಪ್ರೇರಿತವಾಗಿ ಸಾರ್ವಜನಿಕ ನೌಕರನನ್ನು ಕರ್ತವ್ಯದಿಂದ ತಡೆದು ನೋವುಂಟುಮಾಡುವುದು) ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್ (ನವದೆಹಲಿ) ಅಮೃತಾ ಗುಗುಲೋತ್ ತಿಳಿಸಿದ್ದಾರೆ.

ದೆಹಲಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನಿರಾಕರಿಸಿದ್ದರು.

65 ಸಂಸತ್ ಸದಸ್ಯರು ಸೇರಿದಂತೆ 300 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಶುಕ್ರವಾರ ಲುಟಿಯನ್ಸ್ ದೆಹಲಿಯಿಂದ ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com