ಅಯೋಧ್ಯೆಯಲ್ಲಿ ಅಕ್ರಮ ನಿವೇಶನ ಮಾರಾಟ: ಬಿಜೆಪಿ ಶಾಸಕ ಸೇರಿದಂತೆ 40 ಮಂದಿ ಹೆಸರು ಪ್ರಕಟ

ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಬಿಜೆಪಿ ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಯೋಧ್ಯೆಯಲ್ಲಿ ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಆರೋಪಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಅಯೋಧ್ಯೆ: ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಬಿಜೆಪಿ ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಯೋಧ್ಯೆಯಲ್ಲಿ ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಆರೋಪಿಸಿದೆ.

ಪ್ರಾಧಿಕಾರ ಪ್ರದೇಶದಲ್ಲಿ ಅಕ್ರಮವಾಗಿ ಭೂಮಿ ಖರೀದಿಸಿ ಮಾರಾಟ ಮಾಡಿದ ಹಾಗೂ ನಿರ್ಮಾಣ ಕಾಮಗಾರಿ ಪಡೆದ 40 ಮಂದಿಯ ಪಟ್ಟಿಯನ್ನು ಪ್ರಾಧಿಕಾರ ಬಿಡುಗಡೆ ಮಾಡಿದೆ ಎಂದು ಪ್ರಾಧಿಕಾರದ ಉಪಾಧ್ಯಕ್ಷ ವಿಶಾಲ್ ಸಿಂಗ್ ತಿಳಿಸಿದರು. ಎಲ್ಲ 40 ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಮಿಲ್ಕಿಪುರದ ಬಿಜೆಪಿಯ ಮಾಜಿ ಶಾಸಕ ಗೋರಖನಾಥ್ ಬಾಬಾ ಅವರ ಹೆಸರೂ ಕೂಡ ಪಟ್ಟಿಯಲ್ಲಿದೆ.

ಆದರೆ ಮೇಯರ್ ರಿಷಿಕೇಶ್ ಉಪಾಧ್ಯಾಯ ಮತ್ತು ಶಾಸಕ ವೇದ್ ಪ್ರಕಾಶ್ ಗುಪ್ತಾ ಅವರು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ. ಪ್ರಾಧಿಕಾರವು ಬಿಡುಗಡೆ ಮಾಡಿದ ಆಪಾದಿತ ಅಪರಾಧಿಗಳ ಪಟ್ಟಿಯಲ್ಲಿ ಪಿತೂರಿ ಇದೆ ಎಂದು ಆರೋಪಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಪ್ರತಿಸ್ಪರ್ಧಿ ಪಕ್ಷಗಳು ಅಯೋಧ್ಯೆಯಲ್ಲಿ ಅಕ್ರಮ ಭೂಮಿ ಖರೀದಿ ಮತ್ತು ಮಾರಾಟದ ವಿಷಯವನ್ನು ಪ್ರಸ್ತಾಪಿಸಿದ್ದವು.ಈ ಕುರಿತು ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಆಗ್ರಹಿಸಿ ಸ್ಥಳೀಯ ಸಂಸದ ಲಲ್ಲು ಸಿಂಗ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.

ಇದೀಗ ಪಟ್ಟಿ ಬಹಿರಂಗವಾಗುತ್ತಿದ್ದಂತೆ ಸಮಾಜವಾದಿ ಪಕ್ಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com