ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗ ಸಭೆಯಿಂದ ಹೊರಗುಳಿದ ನಿತೀಶ್ ಕುಮಾರ್, ಕೆಸಿಆರ್

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮುನಿಸು ತೋರಿರುವ ಮುಖ್ಯಮಂತ್ರಿಗಳಾದ ಕೆ.ಚಂದ್ರಶೇಖರ್ ರಾವ್ ಮತ್ತು ನಿತೀಶ್ ಕುಮಾರ್ ಅವರು ಭಾನುವಾರ ನಡೆದ ನೀತಿ ಆಯೋಗದ ಸಭೆಯಿಂದ ಹೊರಗುಳಿದಿದ್ದಾರೆ. 
ನೀತಿ ಆಯೋಗ ಸಭೆ
ನೀತಿ ಆಯೋಗ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮುನಿಸು ತೋರಿರುವ ಮುಖ್ಯಮಂತ್ರಿಗಳಾದ ಕೆ.ಚಂದ್ರಶೇಖರ್ ರಾವ್ ಮತ್ತು ನಿತೀಶ್ ಕುಮಾರ್ ಅವರು ಭಾನುವಾರ ನಡೆದ ನೀತಿ ಆಯೋಗದ ಸಭೆಯಿಂದ ಹೊರಗುಳಿದಿದ್ದಾರೆ. 

ರಾಷ್ಟ್ರ ರಾಜಧಾನಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಪ್ರಸ್ತುತ ನಡೆಯುತ್ತಿರುವ ನೀತಿ ಆಯೋಗದ ಏಳನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಬ್ಬರು ದೊಡ್ಡ ನಾಯಕರು ಸಭೆಯಿಂದ ಹೊರಗುಳಿದಿದ್ದಾರೆ.

ಕೆಸಿಆರ್ ಅವರು ಈ ಹಿಂದೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದು, ತಮ್ಮ ನಿರ್ಧಾರವು ತೆಲಂಗಾಣ ಸೇರಿದಂತೆ ರಾಜ್ಯಗಳ ವಿರುದ್ಧ ಕೇಂದ್ರದ ಘೋರ ತಾರತಮ್ಯದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ. ಕೋವಿಡ್ 19  ನಿಂದ ಚೇತರಿಸಿಕೊಂಡಿರುವ ನಿತೀಶ್ ಕುಮಾರ್, ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಪ್ರಧಾನಿ ನೇತೃತ್ವದ ಕಾರ್ಯಕ್ರಮದಿಂದ ಹೊರಗುಳಿದಿದ್ದಾರೆ.

ಈ ಸಭೆಯು ಜುಲೈ 2019 ರ ನಂತರ ಮೊದಲ ಬಾರಿಗೆ ನೀತಿ ಆಯೋಗದ ಮುಖಾಮುಖಿ ಸಭೆಯಾಗಿದೆ. ನೀತಿ ಆಯೋಗದ ಕೌನ್ಸಿಲ್ ನಲ್ಲಿ ಎಲ್ಲಾ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಪ್ರಧಾನ ಮಂತ್ರಿಗಳು ನೀತಿ ಆಯೋಗದ ಅಧ್ಯಕ್ಷರಾಗಿದ್ದಾರೆ.

ನೀತಿ ಆಯೋಗದ ಸಭೆಯ ಕಾರ್ಯಸೂಚಿಯು ಬೆಳೆ ವೈವಿಧ್ಯೀಕರಣ ಮತ್ತು ಎಣ್ಣೆಕಾಳು, ದ್ವಿದಳ ಧಾನ್ಯಗಳು ಮತ್ತು ಕೃಷಿ ಸಮುದಾಯಗಳಲ್ಲಿ ಸ್ವಾವಲಂಬನೆಯನ್ನು ಸಾಧಿಸುವುದನ್ನು ಒಳಗೊಂಡಿದೆ. ರಾಷ್ಟ್ರೀಯ ಶಿಕ್ಷಣ ನೀತಿ-ಶಾಲಾ ಶಿಕ್ಷಣದ ಅನುಷ್ಠಾನ, ರಾಷ್ಟ್ರೀಯ ಶಿಕ್ಷಣ ನೀತಿ-ಉನ್ನತ ಶಿಕ್ಷಣದ ಅನುಷ್ಠಾನ, ಮತ್ತು ನಗರ ಆಡಳಿತವನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com