5 ಲಕ್ಷ ಮುಸ್ಲಿಂ ಮನೆಗಳು, ಮದರಸಾ, ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಬಿಜೆಪಿ ತಯಾರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು  ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. 

ಮದರಸಾಗಳು ಮತ್ತು ದರ್ಗಾಗಳಲ್ಲಿ ಧ್ವಜಾರೋಹಣ ಮಾಡುವ ಫೋಟೋಗಳನ್ನು ಕ್ಲಿಕ್ ಮಾಡಿ ಮತ್ತು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವಂತೆ ಬಿಜೆಪಿ ಅಲ್ಪಸಂಖ್ಯಾತ ಘಟಕ ಹೇಳಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಯೋಜನೆಯನ್ನು ದೃಢಪಡಿಸಿರುವ  ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ, ಮದರಸಾ ಮತ್ತು ದರ್ಗಾಗಳಲ್ಲಿ ಹೆಚ್ಚಿನ ಜನ ಸೇರುವುದರಿಂದ ಸಂದೇಶವನ್ನು ಹರಡಲು ನೆರವಾಗುವುದರಿಂದ  ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

2017ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ಸ್ವಾತಂತ್ರ್ಯ ದಿನದಂದು ರಾಜ್ಯದ ಮದರಸಾಗಳಲ್ಲಿ ಧ್ವಜಾರೋಹಣ ಮತ್ತು ರಾಷ್ಟ್ರಗೀತೆಯನ್ನು ಕಡ್ಡಾಯಗೊಳಿಸಿತ್ತು ಎಂದು ಅಲಿ ಹೇಳಿದರು. ಬಿಜೆಪಿ ಮೂಲಗಳ ಪ್ರಕಾರ, ರಾಜ್ಯದಲ್ಲಿ 4 ಕೋಟಿಗೂ ಹೆಚ್ಚು ಮನೆಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ ಹೊಂದಲಾಗಿದೆ. 

ಈ ಮಧ್ಯೆ ಆಡಳಿತ ಪಕ್ಷದ ಈ ಯೋಜನೆಗೆ ಪ್ರತಿಕ್ರಿಯಿಸಿರುವ  ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ, ಇದು ತ್ರಿವರ್ಣ ಧ್ವಜವನ್ನು ರಾಜಕೀಯಗೊಳಿಸುವ ತಂತ್ರ ಎಂದು ಬಣ್ಣಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com